ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷರ ಪಟ್ಟಕ್ಕೆ ರಾಹುಲ್ ಗಾಂಧಿಯವರೇ ಆದ್ಯತೆಯ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್ ಹೇಳಿದ್ದಾರೆ.
Advertisement
2019ರ ಮಹಾ ಚುನಾವಣೆಯಲ್ಲಿ ಕಾಂಗ್ರೆಸ್ ನೀರಸ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಆಗ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಆಗ ಸೋನಿಯಾ ಗಾಂಧಿಯವರು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಈಗ ರಾಹುಲ್ ಗಾಂಧಿಯವರಿಗೆ ಪುನಃ ಪಕ್ಷದ ಆಡಳಿತ ಚುಕ್ಕಾಣಿ ಹಿಡಿಯಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಶಶಿ ತರೂರ್ ಅವರು ಮೇಲಿನಂತೆ ಸ್ಪಷ್ಟನೆ ನೀಡಿದ್ದಾರೆ.