Advertisement

ಗಾಂಧಿ ಕುಟುಂಬದ ಕೈತಪ್ಪಲಿದೆ ಕೈ ಚುಕ್ಕಾಣಿ? ತರೂರ್ ಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಸಾಧ್ಯತೆ

11:55 AM Aug 30, 2022 | Team Udayavani |

ನವದೆಹಲಿ: ಕಾಂಗ್ರೆಸ್ ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಗಾಂಧಿ ಕುಟುಂಬದ ವಿರುದ್ಧ ಕಾಂಗ್ರೆಸ್ ನ ಜಿ-23 ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು, ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್ ಸೇರಿದಂತೆ ಕೆಲವು ಮುಖಂಡರು ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆ ನಡುವೆಯೇ ಶಶಿ ತರೂರ್ ಕಾಂಗ್ರೆಸ್ ಅಧ್ಯಕ್ಷಗಾದಿಯನ್ನು ಏರುವ ಮೂಲಕ ಪಕ್ಷವನ್ನು ಮುನ್ನಡೆಸಲಿದ್ದಾರೆಯೇ ಎಂಬ ಊಹಾಪೋಹ ಹರಿದಾಡತೊಡಗಿದೆ.

Advertisement

ಇದನ್ನೂ ಓದಿ:ಚಿತ್ತಾಪುರ: ಶಾಲೆ ತೆರೆದು 55 ವರ್ಷ ಕಳೆದರೂ ಇಲ್ಲಿ ದೈಹಿಕ ಶಿಕ್ಷಕರೇ ಇಲ್ಲ!

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಬಗ್ಗೆ ಶಶಿ ತರೂರ್ ಇನ್ನಷ್ಟೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಮೂಲಗಳು ತಿಳಿಸಿವೆ. ತಾನು ಅಧ್ಯಕ್ಷ ಸ್ಥಾನದ ಬಗ್ಗೆ ಚಿಂತಿಸಿಲ್ಲ ಎಂದು ಹೇಳಿಕೊಂಡಿರುವ ಶಶಿ ತರೂರ್ ಈ ಬಗ್ಗೆ ಅವರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಲಯಾಳಂ ದೈನಿಕ “ಮಾತೃಭೂಮಿ”ಯಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಸುವಂತೆ ಕರೆ ನೀಡಿ ಶಶಿತರೂರ್ ಲೇಖನ ಬರೆದಿದ್ದು, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆಂದು ವರದಿ ವಿವರಿಸಿದೆ.

ಕಾಂಗ್ರೆಸ್ ಹೈಕಮಾಂಡ್ ಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸ್ಥಾನಗಳಿಗೂ ಚುನಾವಣೆ ನಡೆಯಲಿದೆ. ಪ್ರಮುಖ ಸ್ಥಾನಗಳಿಂದ ಪಕ್ಷವನ್ನು ಯಾರು ಮುನ್ನಡೆಸುತ್ತಾರೆ ಎಂಬುದನ್ನು ಎಐಸಿಸಿ ಮತ್ತು ಪಿಸಿಸಿ ಪ್ರತಿನಿಧಿಗಳಿಗೆ ಸಹಾಯಕವಾಗಲಿದೆ ಎಂದು ತರೂರ್ ಲೇಖನದಲ್ಲಿ ತಿಳಿಸಿದ್ದಾರೆ.

Advertisement

ಕಾಂಗ್ರೆಸ್ ಪಕ್ಷ ಸಂಘಟನಾತ್ಮಕವಾಗಿ ಪುನರ್ ರಚಿಸಲು ಚುನಾವಣೆ ನಡೆಯಬೇಕೆಂದು 2020ರಲ್ಲಿ ಜಿ-23 ಮುಖಂಡರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಚುನಾವಣೆ ನಡೆಸಲು ಇನ್ನಷ್ಟೇ ದಿನಾಂಕವನ್ನು ನಿರ್ಧರಿಸಬೇಕಾಗಿದೆ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next