Advertisement

ಏಕೈಕ ಮಹಿಳಾ ಸಚಿವೆಯಾಗಿರುವ ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ: ಸಚಿವೆ ಶಶಿಕಲಾ ಜೊಲ್ಲೆ

07:25 PM Nov 18, 2020 | sudhir |

ಹುಬ್ಬಳ್ಳಿ: ‘ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನನ್ನ‌ ಹೆಸರು ಕೈಬಿಡಲಾಗುತ್ತದೆ ಎಂಬ ಮಾತುಗಳು ಹರಿದಾಡುತ್ತಿವೆ. ಇದು ಮಾಧ್ಯಮ ಸೃಷ್ಟಿ. ಆದರೂ, ಪಕ್ಷದ ನಿರ್ಧಾರಕ್ಕೆ ನಾನು ಸದಾ ಬದ್ಧವಾಗಿರುತ್ತೇನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

Advertisement

ಹುಬ್ಬಳ್ಳಿಯ ಉಣಕಲ್ಲದಲ್ಲಿರುವ ಮನೋವಿಕಲ ಬಾಲಕಿಯರ ಸರಕಾರಿ ಬಾಲ ಮಂದಿರಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನಾಯಕರು ನೀಡಿದ್ದ ಜವಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಇಲಾಖೆಯಲ್ಲಿ ಹಲವು ಬದಲಾವಣೆಗೆ ಶ್ರಮಿಸಿದ್ದೇನೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೈ ಬಿಡುತ್ತಾರೆ ಎನ್ನುವುದು ಕೇವಲ ಮಾಧ್ಯಮಗಳ ಸೃಷ್ಟಿಯಾಗಿದೆ. ಏಕೈಕ ಮಹಿಳಾ ಸಚಿವೆಯಾಗಿರುವ ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂಬ ವಿಶ್ವಾಸವಿದೆ’ ಎಂದರು.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುತ್ತಿರುವ ಆರೋಪ: ಕಂಗನಾ, ರಂಗೋಲಿಗೆ ಮುಂಬೈ ಪೊಲೀಸರಿಂದ ಮೂರನೇ ಸಮನ್ಸ್

ಮರಾಠ ಅಭಿವೃದ್ಧಿ ಪ್ರಾಧಿಕಾರ ಭಾಷೆಗೆ ಸೀಮಿತಗೊಳಿಸಬಾರದು. ಇದು ಮರಾಠ ಸಮಾಜ ಅಭಿವೃದ್ಧಿಗಾಗಿ. ಸದುದ್ದೇಶದಿಂದ ಈ ಪ್ರಾಧಿಕಾರ ಆರಂಭಿಸಲಾಗಿದೆ. ಇದರಂತೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಕೂಡ ಒಂದಾಗಿದೆ. ಹೆಸರಿನ ಕುರಿತು ಒಂದಿಷ್ಟು ಚರ್ಚೆಗಳು ನಡೆಯುತ್ತಿವೆ ಹೊರತು ನಿಗಮ ಸ್ಥಾಪನೆಗೆ ವಿರೋಧ ವ್ಯಕ್ತವಾಗಿಲ್ಲ. ವೀರಶೈವ ಲಿಂಗಾಯತರಲ್ಲ ಎಲ್ಲಾ ಉಪ ಜಾತಿಗಳನ್ನು ಕಾಣುತ್ತೇವೆ. ಹಿಂದಿನ ಎಲ್ಲಾ ನಿಗಮಗಳು ಇರುವಂತೆ ಈ ನಿಗಮಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next