ಧಾರವಾಡ: ಮರಾಠಾ ಪ್ರಾಧಿಕಾರ ರಚನೆ ಇದು ಮರಾಠಾ ಭಾಷೆಗೆ ಸಂಬಂಧಿಸಿದ್ದಲ್ಲ ಬದಲಾಗಿ ಸಮುದಾಯಕ್ಕೆ ಸಂಬಂಧಪಟ್ಟಿದ್ದು ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮರಾಠಾ ಸಮುದಾಯದವರಿಗಾಗಿ ತರುತ್ತಿರುವ ಪ್ರಾಧಿಕಾರ. ಭಾಷೆ ಬಗ್ಗೆ ಇದರಲ್ಲಿ ಯಾವುದೇ ವಿಷಯಗಳಿಲ್ಲ. ಮರಾಠಾ ಸಮುದಾಯದವರು ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಈ ಮರಾಠಾ ಪ್ರಾಧಿಕಾರ ರಚನೆ ಮಾಡಲಾಗುತ್ತಿದೆ. ಹಿಂದುಳಿದ ಸಮುದಾಯವರ ಏಳಿಗೆಗಾಗಿ ಪ್ರಾಧಿಕಾರ ರಚನೆ ಮಾಡಲಾಗುತ್ತಿದೆ. ಇದರಲ್ಲಿ ಭಾಷೆಯ ಯಾವುದೇ ವಿಷಯ ಇಲ್ಲ ಎಂದರು.
ಬಿಜೆಪಿ ಪಕ್ಷವು ಮೂಲ ಬಿಜೆಪಿಗರನ್ನು ಕಡೆಗಣಿಸುತ್ತಿಲ್ಲ. ಯಾರಿಗೂ ಅನ್ಯಾಯವಾಗದಂತೆ ಮಣೆ ಹಾಕಲಿದೆ. ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಯಾವ ಶಾಸಕರಿಗೂ ಅನ್ಯಾಯ ಮಾಡುತ್ತಿಲ್ಲ. ಕೊರೊನಾ ಹಾಗೂ ಪ್ರವಾಹ ಪರಿಸ್ಥಿತಿಯಿಂದ ಅನುದಾನದ ಕೊರತೆಯಾಗಿದೆಯಷ್ಟೆ ಎಂದರು.
ಇದನ್ನೂ ಓದಿ:ಪಶ್ಚಿಮ ಬಂಗಾಳ: ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಸ್ಫೋಟ ಐವರು ಸಾವು! ಹಲವರಿಗೆ ಗಂಭೀರ ಗಾಯ
ಲಾಕಡೌನ್ ಅವಧಿಯಲ್ಲಿ ಕೆಲವು ಜಿಲ್ಲೆಗಳಲ್ಲಿ ಬಾಲ್ಯ ವಿವಾಹಗಳಾಗಿವೆ. ದೂರು ಕೂಡ ದಾಖಲಾಗುವುದು ಸಮಸ್ಯೆಯಾಗಿತ್ತು. ಆದರೆ, ಈಗ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.