Advertisement

ಶಶಿಕಲಾ ಜೊಲ್ಲೆಯವರಿಗೆ ಸಚಿವ ಸ್ಥಾನ : ಚಿಕ್ಕೋಡಿ-ನಿಪ್ಪಾಣಿಯಲ್ಲಿ ಸಂಭ್ರಮಾಚರಣೆ

01:20 PM Aug 04, 2021 | Team Udayavani |

ಚಿಕ್ಕೋಡಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಸಮರ್ಥವಾಗಿ ಸಚಿವ ಸ್ಥಾನ ನಿಭಾಯಿಸಿದ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ.

Advertisement

ಇದನ್ನೂ ಓದಿ : ಬಿ.ವೈ ವಿಜಯೇಂದ್ರಗೆ ಇಲ್ಲ ಸಚಿವ ಪಟ್ಟ, ಯಡಿಯೂರಪ್ಪ ವಿರುದ್ಧ ಗುಡುಗಿದವರಿಗೆ ಶಾಕ್!

ನೂತನ ಸಚಿವರ ಪಟ್ಟಿ ಹೊರಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.

ಚಿಕ್ಕೋಡಿ ನಗರದ ಬಿಜೆಪಿ ಕಚೇರಿ ಮುಂದೆ ಜೊಲ್ಲೆ ಅಭಿಮಾನಿಗಳು. ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಜೈಕಾರ ಕೂಗಿದರು.

ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ಹೈಕಮಾಂಡ ನಾಯಕರ ಜೊತೆ ಉತ್ತಮ ಬಾಂದವ್ಯ ಇಟ್ಟುಕೊಂಡಿರುವ ಪರಿಣಾಮ ಶಶಿಕಲಾ ಜೊಲ್ಲೆ ಅವರಿಗೆ ಸಚಿವ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಇದನ್ನೂ ಓದಿ : ಬಿ.ವೈ ವಿಜಯೇಂದ್ರಗೆ ಇಲ್ಲ ಸಚಿವ ಪಟ್ಟ, ಯಡಿಯೂರಪ್ಪ ವಿರುದ್ಧ ಗುಡುಗಿದವರಿಗೆ ಶಾಕ್!

Advertisement

Udayavani is now on Telegram. Click here to join our channel and stay updated with the latest news.

Next