Advertisement

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಜೊಲ್ಲೆ

01:07 PM Sep 16, 2021 | Team Udayavani |

ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.

Advertisement

ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು ವಿಕಾಸಸೌಧದಲ್ಲಿ ಸಚಿವ ಡಾ. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ, ಅವರ ಕಚೇರಿಯಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಯವರನ್ನು ಭೇಟಿ ಮಾಡಿ ಮನವಿ ಮಾಡಿದರು.

ಇದನ್ನೂ ಓದಿ:ಅಡೆತಡೆಗಳನ್ನು ದಾಟಿದ ‘ಗ್ರೂಫಿ’: ಹೊಸಬರ ಮುಖದಲ್ಲಿ ಮುಗುಳು ನಗು

ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳನ್ನು ಕರೆಯಿಸಿ ಅವರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ದೇವಸ್ಥಾನದ ಹೊರಾಂಗಣ ಮತ್ತು ಒಳಾಂಗಣಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇರುವ ತಾಂತ್ರಿಕ ತೊಡಕುಗಳನ್ನು ಬಗೆಹರಿಸಿ ಶೀಘ್ರವೇ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next