Advertisement

​​​​​​​ಕೈ ತೊರೆದು ಜೆಡಿಎಸ್‌ ಸೇರ್ಪಡೆಯಾದ ನಟ ಶಶಿಕುಮಾರ್‌ !

04:03 PM Apr 19, 2018 | |

ಚಿತ್ರದುರ್ಗ: ಕಾಂಗ್ರೆಸ್‌ ಟಿಕೆಟ್‌ ವಂಚಿತನಾಗಿದ್ದ ನಟ ಶಶಿಕುಮಾರ್‌ ಅವರು ಪಕ್ಷಕ್ಕೆ ಗುಡ್‌ ಬೈ ಹೇಳುವ ಮೂಲಕ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ. 

Advertisement

ಗುರುವಾರ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿದ ಶಶಿಕುಮಾರ್‌ ಅವರು ಪಕ್ಷಕ್ಕೆ ಸೇರ್ಪಡೆಯಾದರು. 

ಮಾಜಿ ಪ್ರಧಾನಿ  ಎಚ್‌.ಡಿ.ದೇವೇಗೌಡ ಅವರು ಶಶಿಕುಮಾರ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತುಕತೆ ನಡೆಸಿದರು. 

ಶಶಿಕುಮಾರ್‌ ಹೊಸದುರ್ಗ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಶಿಕುಮಾರ್‌ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next