Advertisement

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ: ಶಾಗೆ ಮನವಿ

10:30 AM Aug 09, 2017 | Team Udayavani |

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ತ್ರಿವಿಧ ದಾಸೋಹಿ ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಕುರಿತು ಮನವಿ ಸಲ್ಲಿಸಲು ಪಕ್ಷದ ವೀರಶೈವ- ಲಿಂಗಾಯತ ನಾಯಕರು ಚಿಂತನೆ ನಡೆಸಿದ್ದಾರೆ.

Advertisement

ಅಮಿತ್‌ ಶಾ ಭೇಟಿ ವೇಳೆ ಎಲ್ಲಾ ಸಮುದಾಯಗಳನ್ನೂ ಬಿಜೆಪಿಯತ್ತ ಸೆಳೆಯಲು ಗಮನಹರಿಸಿರುವ ಬಿಜೆಪಿ ನಾಯಕರು, ಬಹುಸಂಖ್ಯಾತ ವೀರಶೈವ-ಲಿಂಗಾಯತ ಸಮುದಾಯದ ಮನಗೆಲ್ಲಲು ಈ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲೇ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರದ ಗಮನ ಸೆಳೆಯುವಂತೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಚುಂಚನಗಿರಿಗೆ ಶಾ ಭೇಟಿ: ಅಮಿತ್‌ ಶಾ ರಾಜ್ಯಕ್ಕೆ ಭೇಟಿ  ನೀಡುವ ಸಂದರ್ಭದಲ್ಲಿ ಬಹುಸಂಖ್ಯೆಯ ಮತದಾರರನ್ನು ಹೊಂದಿರುವ ಒಕ್ಕಲಿಗ, ಪರಿಶಿಷ್ಟ ಮತ್ತು ಹಿಂದುಳಿದ ವರ್ಗಗಳ ಸಮುದಾಯದವರನ್ನು ಸೆಳೆಯುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಆದಿಚುಂಚನಗಿರಿ ಮಠಕ್ಕೆ ತೆರಳಲಿರುವ ಅಮಿತ್‌ ಶಾ, ಆ ಸಮುದಾಯದ ಪ್ರಮುಖ ಸ್ವಾಮೀಜಿಯವರ ಜತೆ ಮಾತುಕತೆ ನಡೆಸಲಿದ್ದಾರೆ. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪಂಗಡದ
ಪ್ರಮುಖರು ಹಾಗೂ ಹಿಂದುಳಿದ ವರ್ಗದವರ ಮುಖಂಡರ ಜತೆಗೂ ಪ್ರತ್ಯೇಕ ಸಭೆಗಳನ್ನು ಆಯೋಜಿಸಿದ್ದಾರೆ. ಆದರೆ, ಮತ್ತೂಂದು ಪ್ರಮುಖ ಸಮುದಾಯವಾಗಿರುವ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸಂಬಂಧಿಸಿದಂತೆ ಯಾವುದೇ ಕಾರ್ಯಕ್ರಮ ಆಯೋಜಿಸಿಲ್ಲ. ಈ ಹಿನ್ನೆಲೆಯಲ್ಲಿ ಸಮುದಾಯದವರಿಗೆ ನೋವಾಗಬಾರದು ಎಂಬ ಕಾರಣಕ್ಕೆ ಸಮುದಾಯದ ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ಘೋಷಿಸುವಂತೆ ಮನವಿ ಸಲ್ಲಿಸುವ ಸಾಧ್ಯತೆ ಎದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next