Advertisement

ಶಿಡ್ಲಘಟ್ಟದಲ್ಲಿ ಮಿನಿ ದ್ವೀಪವಾದ Railway Underpass

05:50 PM Jul 08, 2023 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಜು.8ರ ಶನಿವಾರ ಸಂಜೆ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತು.

Advertisement

ಸುಮಾರು ಅರ್ಧ ಗಂಟೆ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರು ಮತ್ತು ನಾಗರಿಕರು ಸಂಚರಿಸಲು ಪರದಾಡುವಂತಾಯಿತು.

ನಗರದ ತಾಲೂಕು ಕಚೇರಿ, ಸಾರ್ವಜನಿಕ ಆಸ್ಪತ್ರೆ, ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆ, ಶಾಲಾ-ಕಾಲೇಜುಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಬರುವ ರೈಲ್ವೆ ಅಂಡರ್ ಪಾಸ್ ಕೆಳಗಡೆ ಮಳೆ ನೀರು ನಿಂತು ಒಂದು ರೀತಿಯ ಮಿನಿ ದ್ವೀಪವಾಗಿ ಪರಿವರ್ತನೆಗೊಂಡು ವಾಹನ ಸವಾರರು ಸಂಚರಿಸಲು ಕಿರಿಕಿರಿ ಅನುಭವಿಸುವಂತಾಯಿತು.

ಮಳೆಗಾಲದಲ್ಲಿ ರೈಲ್ವೆ ಕೆಲ ಸೇತುವೆ ಜಲಾವೃತಗೊಳ್ಳುತ್ತಿರುವ ಕುರಿತು ಈಗಾಗಲೇ ಇಲಾಖೆಯ ಅಧಿಕಾರಿಗಳು ಮತ್ತು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ರೀತಿಯ ಪ್ರಯೋಜನವಿಲ್ಲಂತಾಗಿದೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next