ರಾಯಚೂರು: ಗ್ರಾಮೀಣ ಭಾಗದಲ್ಲಿ ಕುರಿಗಳನ್ನು ಕಳುವು ಮಾಡಿಕೊಂಡು ಹೋಗುತ್ತಿದ್ದ ಕಳ್ಳನನ್ನು ಗ್ರಾಮಸ್ಥರು ಬಂಧಿಸಿರುವ ಘಟನೆ ತಾಲೂಕಿನ ಕಡಗಂದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಶನಿವಾರ ಬೆಳಗ್ಗೆ ಗ್ರಾಮದ ಮುಖಂಡರು ವಿಹಾರಕ್ಕೆಂದು ಹೋಗುವಾಗ ಇಬ್ಬರು ಕುರಿಗಳನ್ನು ಹೊಡೆದುಕೊಂಡು ಹೋಗುತ್ತಿದ್ದರು. ಅವರನ್ನು ವಿಚಾರಿಸಿದಾಗ ನಾವು ಪಕ್ಕದ ಅರಸಿಕೆರೆಯವರು ಎಂದು ಸುಳ್ಳು ಹೇಳಿದ್ದಾರೆ. ಈ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ಅವರನ್ನು ತಡೆದು ವಿಚಾರಿಸಿದಾಗ ಸತ್ಯ ಬಯಲಾಗಿದೆ.
ಇದನ್ನೂ ಓದಿ:ರಾಯಚೂರಿನಲ್ಲಿ ತಡರಾತ್ರಿ ವರುಣಾರ್ಭಟ: ಜನಜೀವನ ಅಸ್ತವ್ಯಸ್ತ, ಜಾಗರಣೆ ಮಾಡಿದ ಜನರು!
ಸುಮಾರು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ 10 ಕುರಿಗಳನ್ನು ಕಳವು ಮಾಡಿಕೊಂಡು ಹೋಗುತ್ತಿದ್ದರು. ರೈತ ಮುಖಂಡ ಲಕ್ಷ್ಮಣ ಗೌಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯಾವಾಗ ಪೊಲೀಸರಿಗೆ ಕರೆ ಮಾಡುತ್ತಿದ್ದಂತೆ ಇಬ್ಬರಲ್ಲಿ ಒಬ್ಬ ಕಳ್ಳ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕುರಿಗಳನ್ನು ಹಾಗೂ ಕಳ್ಳನನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿಸಿದ್ದಾರೆ