ನವದೆಹಲಿ:ದೆಹಲಿ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಶೀಲಾ ದೀಕ್ಷಿತ್(81 ವರ್ಷ) ಶನಿವಾರ ನಿಧನ ಹೊಂದಿದ್ದಾರೆ.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದ ಶೀಲಾ ದೀಕ್ಷಿತ್ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಮೂರು ಬಾರಿ ದೆಹಲಿ ಮುಖ್ಯಮಂತ್ರಿ ಗದ್ದುಗೆ ಏರಿದ್ದ ಶೀಲಾ ದೀಕ್ಷಿತ್ ಕಾಂಗ್ರೆಸ್ ನ ಹಿರಿಯ ನಾಯಕಿಯಾಗಿದ್ದರು. ಹೃದಯ ಸಂಬಂಧಿ ಸಮಸ್ಯೆಯಿಂದ ದೆಹಲಿಯ ಫೋರ್ಟಿಸ್ ಎಸ್ಕಾರ್ಟ್ಸ್ ಹಾರ್ಟ್ ಇನ್ಸ್ ಟಿಟ್ಯೂಟ್ ಗೆ ದಾಖಲಾಗಿದ್ದರು.
Related Articles
ದೆಹಲಿ ಫೋರ್ಟಿಸ್ ಆಸ್ಪತ್ರೆಯ ಅಧ್ಯಕ್ಷ ಅಶೋಕ್ ಸೇಥ್ ಸಲಹೆ ಮೇರೆಗೆ ಕಳೆದ ವರ್ಷ ಫ್ರಾನ್ಸ್ ನಲ್ಲಿ ಶೀಲಾ ದೀಕ್ಷಿತ್ ಅವರು ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು.
ಪ್ರಧಾನಿ, ರಾಷ್ಟ್ರಪತಿ ಸಂತಾಪ:
ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ನಿಧನಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಂತಾಪ ವ್ಯಕ್ತಪಡಿಸಿದ್ದಾರೆ.