Advertisement

ಶೀಲಾ ದೀಕ್ಷಿತ್‌ಗೆ ಕಂಬನಿ ತುಂಬಿದ ವಿದಾಯ

09:07 AM Jul 23, 2019 | Team Udayavani |

ಹೊಸದಿಲ್ಲಿ:ಕಾಂಗ್ರೆಸ್‌ನ ಹಿರಿಯ ನಾಯಕಿ, ದಿಲ್ಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ರ ಅಂತ್ಯ ಸಂಸ್ಕಾರ ರವಿವಾರ ನೆರವೇರಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಹೊಸದಿಲ್ಲಿಯಲ್ಲಿರುವ ನಿಮಗ್‌ಬೋಧ್‌ ಶವಸಂಸ್ಕರಣಾಗಾರದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಿದವು. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ, ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದು, ಅಂತಿಮ ನಮನ ಸಲ್ಲಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next