Advertisement
ಪರಿಹಾರ ಕೇಂದ್ರದಲ್ಲಿ ವ್ಯವಸ್ಥಿತವಾಗಿ ಊಟೋಪಚಾರ ಕಲ್ಪಿಸುವುದರ ಜತೆಗೆ ಆರೋಗ್ಯವನ್ನು ನೋಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿ ಪರಿಹಾರ ಕೇಂದ್ರಕ್ಕೆ ಇಬ್ಬರು ವೈದ್ಯರು ಹಾಗೂ ಶುಶ್ರೂಷಕರನ್ನು ನಿಯೋಜಿಸಲಾಗಿದ್ದು ಎಲ್ಲ ರೀತಿಯ ಔಷಧಿ ದಾಸ್ತಾನು ಮಾಡಿಕೊಳ್ಳಲಾಗಿದೆ. ಮಡಿಕೇರಿ ತಾಲೂಕಿಗೆ 2, ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ 1 ಮತ್ತು ವಿರಾಜಪೇಟೆಯಲ್ಲಿ 1 ತಂಡವನ್ನು ರಚಿಸಲಾಗಿದೆ. ಒಂದು ತಂಡದಲ್ಲಿ ಒಬ್ಬ ವೈದ್ಯಾಧಿಕಾರಿ, ಹಿರಿಯ ಆರೋಗ್ಯ ಸಹಾಯಕರು, 4 ಮಂದಿ ಕಿರಿಯ ಆರೋಗ್ಯ ಸಹಾಯಕರು ಕಾರ್ಯನಿರ್ವಹಿಸಲಿದ್ದಾರೆ.
ಎಂದು ರಾಷ್ಟ್ರೀಯ ರೋಗವಾಹಕ ನಿಯಂತ್ರಣ ಕಾರ್ಯಕ್ರಮದ ಉಪ ನಿರ್ದೇಶಕ ಡಾ|ಬಿ.ಜಿ.ಪ್ರಕಾಶ್ ಕುಮಾರ್ ಮಾಹಿತಿ ನೀಡಿದ್ದಾರೆ. 1036 ಕುಟುಂಬಗಳು: ಜಿಲ್ಲೆಯಲ್ಲಿರುವ 26 ಪರಿಹಾರ ಕೇಂದ್ರಗಳಲ್ಲಿ ಒಟ್ಟು 1036 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 1520 ಪುರುಷ ಮತ್ತು 1663 ಮಹಿಳೆ ಸೇರಿದಂತೆ ಒಟ್ಟು 3183 ಜನ ಸಂತ್ರಸ್ತರಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.