Advertisement
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುರುಬ ಸಮುದಾಯವು ದೇಶದಲ್ಲಿ 12 ಕೋಟಿಗೂ ಅಧಿಕ ಸಂಖ್ಯೆಯಲ್ಲಿ ದ್ದು, ವಿವಿಧ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಕರೆಯಲ್ಪಡುತ್ತಿದ್ದಾರೆ. ಒಂದು ಸಾಮಾನ್ಯ ಹೆಸರಿನಲ್ಲಿ ಕರೆಯಬೇಕು ಎಂಬ ಹಿನ್ನೆಲೆಯಲ್ಲಿ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಶನಲ್ ಸಂಘಟನೆಯನ್ನು ಸ್ಥಾಪನೆ ಮಾಡಲಾಗಿದೆ ಎಂದರು.
Related Articles
Advertisement
ಮಾಜಿ ಸಚಿವ ಎಚ್.ಎಂ. ರೇವಣ್ಣ ಮಾತನಾಡಿ, ಶೆಫರ್ಡ್ಸ್ ಇಂಡಿಯಾ ಇಂಟರನ್ಯಾಶನಲ್ ಸ್ಥಾಪಿತ ಅಧ್ಯಕ್ಷ ಎಚ್. ವಿಶ್ವನಾಥ ಅವರಾಗಿದ್ದಾರೆ. ಇಡೀ ಭಾರತದಲ್ಲಿ ಒಂದೊಂದು ರಾಜ್ಯದಲ್ಲಿ ಒಂದೊಂದು ಹೆಸರಿನಲ್ಲಿ ಕರೆಯಲ್ಪಡುವ ಕುರುಬ ಸಮಾಜದ ಸಮಾವೇಶದಲ್ಲಿ ರಾಜ್ಯದ ಅನೇಕ ಕಡೆಗಳಲ್ಲಿ ಸಮಾವೇಶ ಹಮ್ಮಿಕೊಂಡು ಒಗ್ಗಟ್ಟು ಪ್ರದರ್ಶನ ಮಾಡಲಾಗುತ್ತಿದೆ. ಜನತೆ ಒಗ್ಗೂಡಬೇಕು. ಸಮಾಜ ಎಲ್ಲ ಪ್ರಕಾರಗಳಲ್ಲಿ ಮುಂದೆ ಬರಬೇಕು ಎನ್ನುವ ನಿಟ್ಟಿನಲ್ಲಿ ಸಂಘಟನೆ ಮಾಡಲಾಗುತ್ತಿದೆ. ಅಧಿವೇಶನದಲ್ಲಿ ದೇಶದೆಕ್ಕೆಡೆ ಇರುವ ಸಮುದಾಯದ ಸಚಿವರು, ಸಂಸದರು, ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ನಾಗರಾಜ್, ವೈ.ಎನ್. ಗೌಡರ, ಫಕ್ಕೀರಪ್ಪ ಹೆಬಸೂರ, ವಾಸಣ್ಣ ಕುರಡಗಿ, ಬಾಬು ಡಿಗ್ಗಿಮನಿ, ಮಂಜುನಾಥ ಮುನವಳ್ಳಿ, ಶೇಖಣ್ಣ ಕಾಳೆ ಇದ್ದರು.
ಸಂಸದ ಸ್ಥಾನಕ್ಕೆ ಸ್ಪರ್ಧಿಸುವ ಬಯಕೆಯಿದೆ: ನಾನು ಹಿಂದೆ ಕೂಡ ಸಂಸದನಾಗಿದ್ದೆ, ಮುಂದೆ ಕೂಡ ಸಂಸದನಾಗುವ ಬಯಕೆ ಹೊಂದಿದ್ದೇನೆ. ಅವಕಾಶ ಸಿಕ್ಕರೆ ಮೈಸೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ ಹೇಳಿದರು.
ಮೈಸೂರು ಲೋಕಸಭೆ ಕ್ಷೇತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಕೂಡ ಕೇಳಿ ಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಯತೀಂದ್ರ ಅವರು ಯುವಕರಾಗಿದ್ದು, ಅವರು ಸ್ಪರ್ಧಿಸುವುದಕ್ಕೆ ನನ್ನ ಅಭ್ಯಂತರವಿಲ್ಲ ಎಂಬುದಾಗಿಯೂ ತಿಳಿಸಿದರು.