Advertisement

ಸ್ವಾತಂತ್ರ್ಯ ದಿನಾಚರಣೆ ಯಶಸ್ವಿಗೆ ಸಹಕರಿಸಲು ಜಿಲ್ಲಾಧಿಕಾರಿ ಕರೆ

12:18 AM Aug 04, 2019 | Sriram |

ಮಡಿಕೇರಿ: ಜಿಲ್ಲಾಡಳಿತ ವತಿಯಿಂದ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ಆಗಸ್ಟ್‌ 15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳು ಕೈಜೋಡಿಸಿ ಸ್ವಾತಂತ್ರ್ಯ ದಿನಾಚರಣೆ ಯಶಸ್ವಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಕೋರಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು. ಹಾಗೆಯೇ ಸರ್ಕಾರದ ಶಿಷ್ಟಾಚಾರದಂತೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶ‌ ನೀಡಿದರು.

ವಾಟರ್‌ಫ‌್ರೂಫ್ ವೇದಿಕೆ ನಿರ್ಮಾಣ ಮಾಡುವಂತೆ ಲೋಕೋಪಯೋಗಿ ಹಾಗೂ ಪಂಚಾಯತ್‌ ರಾಜ್‌ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು.

ರಿಹರ್ಸ್‌ಲ್ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಲಘು ಉಪಹಾರ, ಕುಡಿಯುವ ನೀರು ವ್ಯವಸ್ಥೆ ಮಾಡುವಂತೆ ನಗರಸಭೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅವರು ಹೇಳಿದರು.

Advertisement

ಕಾರ್ಯಕ್ರಮಕ್ಕೆ ಆಗಮಿಸುವ ಶಾಲಾ ಮಕ್ಕಳಿಗೆ ಉಪಹಾರ ವ್ಯವಸ್ಥೆ ಮಾಡುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು. ಕಾವೇರಿ ಕಲಾಕ್ಷೇತ್ರದಲ್ಲಿ ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಧಿಕಾರಿಗಳು ಮತ್ತು ಸಿಬಂದಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ.ಪೆನ್ನೇಕರ್‌, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಉಪ ಪೊಲೀಸ್‌ ವರಿಷ್ಠಾಧಿಕಾರಿ ಸುಂದರರಾಜ್‌, ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಲೋಕೋಪಯೋಗಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಎಂಜಿನಿಯರ್‌ಗಳು, ಅಧಿಕಾರಿಗಳು, ಶಾಲಾ ಕಾಲೇಜು ಮುಖ್ಯಸ್ಥರು, ಪ್ರಾಂಶುಪಾಲರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಲಹೆ ನೀಡಿದರು.

ಅಚ್ಚುಕಟ್ಟಾಗಿ ನಿರ್ವಹಿಸಿ
ಸ್ವಾತಂತ್ರ್ಯ ದಿನಾಚರಣೆ ಆಚರಣೆ ಸಂಬಂಧ ರಚಿಸಲಾಗಿರುವ ಸಮಿತಿಯ ಮುಖ್ಯಸ್ಥರು ತಮ್ಮ ಹಂತದಲ್ಲಿ ಸಭೆ ನಡೆಸಿ ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಸ್ವಾತಂತ್ರ್ಯ ದಿನಾಚರಣೆ ಇಡೀ ದೇಶದ ಎಲ್ಲರ ಸಂಭ್ರಮ ಆಚರಣೆಯಾಗಿದ್ದು, ಸ್ವಯಂ ಪ್ರೇರಣೆಯಿಂದ ಎಲ್ಲರೂ ಭಾಗವಹಿ ಸಬೇಕು. ಆಗಸ್ಟ್‌, 15 ರಂದು ಬೆಳಗ್ಗೆ ಕೋಟೆ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು, ಹಾಜರಾತಿಯಲ್ಲಿ ತಪ್ಪದೆ ಸಹಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next