Advertisement

ಶಿಡ್ಲಘಟ್ಟದಲ್ಲಿ ಬ್ಯಾಲಹಳ್ಳಿ ಗೋವಿಂದಗೌಡ ಸ್ಪರ್ಧೆ

04:11 PM Feb 13, 2023 | Team Udayavani |

ಶಿಡ್ಲಘಟ್ಟ: ಮುಂಬರುವ ಚುನಾವಣೆಯಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿ ಮಾಡಲು ಎಲ್ಲಾ ರೀತಿಯ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಶಾಸಕ ವಿ. ಮುನಿಯಪ್ಪ ಘೋಷಿಸಿದರು.

Advertisement

ಬೆಂಗಳೂರು ಗ್ರಾಮಾಂತರ ವಿಜಯಪುರದ ಸಮೀಪದ ಖಾಸಗಿ ಪ್ರದೇಶದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿ, ಈ ಕ್ಷೇತ್ರದಲ್ಲಿ ಶಾಸಕನಾಗಿ, ಸಚಿವನಾಗಿ ಸೇವೆ ಮಾಡಿದ್ದು, ಕಷ್ಟದ ವೇಳೆಯಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಹಿತರಕ್ಷಣೆಯ ಜವಾಬ್ದಾರಿಯೊಂದಿಗೆ ಮುಂಬ ರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಕಲ್ಪಿಸ ಬೇಕೆಂದು ಪಕ್ಷದ ವರಿಷ್ಠರು ಮತ್ತು ರಾಜ್ಯ ನಾಯ ಕರನ್ನು ಮನವಿ ಮಾಡಲಾಗುವುದು ಎಂದರು.

ಶಿಡ್ಲಘಟ್ಟ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು-ಮುಖಂಡರ ಸಹಕಾರದಿಂದ ಮತದಾರರ ಆಶೀರ್ವಾದದಿಂದ ಪ್ರಾಮಾಣಿಕವಾಗಿ ಕೆಲಸವನ್ನು ಮಾಡಿದ್ದೇನೆ. ಕೆಲವರು ಬಂಡವಾಳ ಶಾಹಿಗಳು ಕ್ಷೇತ್ರದಲ್ಲಿ ಬಂದು ಅನಗತ್ಯವಾಗಿ ಗೊಂದಲದ ವಾತಾವರಣ ನಿರ್ಮಿಸಲು ಹುನ್ನಾರ ನಡೆಸಿದ್ದಾರೆ. ಅದಕ್ಕೆ ಅವಕಾಶ ನೀಡುವುದಿಲ್ಲ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತರವುದೇ ನನ್ನ ಗುರಿಯೆಂದು ಭಾವುಕರಾದರು.

ಬ್ಯಾಲಹಳ್ಳಿ ಏಕೆ?: ಅವಳಿ ಜಿಲ್ಲೆಯಲ್ಲಿ ರೈತರು ಮತ್ತು ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಎಲ್ಲಾ ರೀತಿಯ ಸಹಕಾರ ಮತ್ತು ನೆರವು ನೀಡುತ್ತಿದ್ದಾರೆ. ಕ್ಷೇತ್ರದ ಪ್ರಗತಿಗಾಗಿ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಕಣಕ್ಕಿಳಿಸಿ ಅವರಿಗೆ ಎಲ್ಲಾ ರೀತಿಯ ಸಹಕಾರ ಮತ್ತು ಬೆಂಬಲವನ್ನು ನೀಡುತ್ತೇನೆ. ಅವಳಿ ಜಿಲ್ಲೆಯಲ್ಲಿ ವಿರೋಧ ಪಕ್ಷದವರನ್ನು ಎದುರಿಸಿ ಪಕ್ಷ ಸಂಘಟನೆಯನ್ನು ಮಾಡಿದ್ದೇನೆ. ನಾನು ಯಾರಿಗೂ ಸಹ ಹೆದರುವುದಿಲ್ಲ ಕ್ಷೇತ್ರದ ಮತದಾರರು ನನ್ನಗೆ ಆ ಶಕ್ತಿಯನ್ನು ಕೊಟ್ಟಿದ್ದಾರೆ ಎಂದ ಶಾಸಕರು ಹಲವು ಅಮಾಯಕರ ಭೂಮಿಯನ್ನು ಕಬಳಿಸಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾದರೂ ಅಂತಹವರು ಕಾಂಗ್ರೆಸ್‌ ಟಿಕೆಟ್‌ ಕೇಳುವ ಮಟ್ಟಕ್ಕೆ ಬಂದಿದ್ದಾರೆ ಅಂತಹವರಿಗೆ ಕೆಲವರು ಬೆಂಬಲಿಸುತ್ತಿರುವುದು ನೋವುಂಟು ಮಾಡಿದೆ ಎಂದು ಪರೋಕ್ಷವಾಗಿ ಎಬಿಡಿ ಸಂಸ್ಥೆಯ ಅಧ್ಯಕ್ಷ ರಾಜೀವ್‌ಗೌಡ ವಿರುದ್ಧ ವಾಗ್ಧಾಳಿ ನಡೆಸಿದರು.

ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೊಂವಿಂದಗೌಡ, ಕೋಚಿಮುಲ್‌ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ಜಿಪಂ ಮಾಜಿ ಅಧ್ಯಕ್ಷ ವಿ.ಸುಭ್ರಮಣಿ, ಹಾಪ್‌ಕಾಮ್ಸ್‌ ಮಾಜಿ ಅಧ್ಯಕ್ಷ ಮುತ್ತೂರು ಚಂದ್ರೇಗೌಡ, ಡಿಸಿಸಿ ಉಪಾಧ್ಯಕ್ಷ ಎ.ನಾಗರಾಜ್‌, ಎಪಿಎಂಸಿ ಮಾಜಿ ಉಪಾಧ್ಯಕ್ಷ ದೊಗರನಾಯಕನಹಳ್ಳಿ ವೆಂಕಟೇಶ್‌, ಎಪಿಎಂಸಿ ಮಾಜಿ ನಿರ್ದೇಶಕ ಮೇಲೂರು ಮುರಳಿ, ಮೇಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮಂಜುನಾಥ್‌, ಮುನಿರಾಜು ಇತರರಿದ್ದರು.

Advertisement

ಕ್ಷೇತ್ರದ ಜನರ ಸೇವಕನಾಗಿ ಶ್ರಮಿಸುವೆ: ಬ್ಯಾಲಹಳ್ಳಿ : 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸುವುದೇ ನನ್ನ ಮುಖ್ಯ ಗುರಿ. ಶಾಸಕ ವಿ.ಮುನಿಯಪ್ಪ ಅವರ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಿ ಕ್ಷೇತ್ರದ ಜನರ ಸೇವಕನಾಗಿ ಕಾರ್ಯ ನಿರ್ವಹಿಸುವುದಾಗಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು. ಕಾಂಗ್ರೆಸ್‌ ಸಭೆಯಲ್ಲಿ ಮಾತನಾಡಿದ ಅವರು ಅವಳಿ ಜಿಲ್ಲೆಯಲ್ಲಿ ಶಾಸಕ ವಿ.ಮುನಿಯಪ್ಪ ನಮ್ಮ ತಂದೆ ಸಮಾನರು ಅವಳಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಶಿಡ್ಲಘಟ್ಟ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಜನರ ಸೇವಕನಾಗಿ ಸೇವೆ ಸಲ್ಲಿಸುತ್ತೇನೆ ಎಂದರು.

ನಾನಾಗಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಂದಿಲ್ಲ ರೇಷ್ಮೆ ಬೆಳೆಗಾರರ ಹಿತರಕ್ಷಣಾ ವೇದಿಕೆಯ ಮೂಲಕ ರೇಷ್ಮೆ ಬೆಳೆಗಾರರ ಪರವಾಗಿ ಸತತವಾಗಿ ಹೋರಾಟ ಮಾಡಿಕೊಂಡು ಈ ಸ್ಥಾನಕ್ಕೆ ಬರಲು ಶಾಸಕ ವಿ.ಮುನಿಯಪ್ಪ ಅವರು ಸಹ ಸಹಕಾರ ಮತ್ತು ಬೆಂಬಲ ನೀಡಿದ್ದಾರೆ ಅವರು ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದಾರೆ ಅದಕ್ಕೆ ನಾನು ಅವರಿಗೆ ಸದಾ ಚಿರಋಣಿಯಾ ಗಿರುತ್ತೇನೆ ಎಂದರು. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಚಿಲಕಲನೇಪುì ಕ್ಷೇತ್ರದಲ್ಲಿ ಪ್ರಾಬಲ್ಯವನ್ನು ಹೊಂದಿರುವ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್‌ ಅವರ ಸಹಕಾರವನ್ನು ಪಡೆದುಕೊಳ್ಳುತ್ತೇನೆ. ಜತೆಗೆ ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್‌, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಆಶೀರ್ವಾದ ನನ್ನ ಮೇಲೆ ಇದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next