ಶಿಡ್ಲಘಟ್ಟ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ರೈಲ್ವೆ ಕೆಳಸೇತುವೆ ಬಳಿ ಚಲಿಸುತ್ತಿದ್ದ ಮಾರುತಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಶಿಡ್ಲಘಟ್ಟ ನಗರದ ಸಂತೋಷ ನಗರದ ಮಜೀದ್ ಎಂಬವರಿಗೆ ಸೇರಿದ ಮಾರುತಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಇಬ್ಬರು ಮಕ್ಕಳ ಸಹಿತ ಐದು ಮಂದಿ ಕೆಳಗಿಳಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ. ಘಟನೆಯಲ್ಲಿ ಕಾರು ಸುಟ್ಟು ಕರಕಲಾಗಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ನೋಡಿದ ನಾಗರಿಕರು ಕಾರು ಚಾಲಕನಿಗೆ ಮಾಹಿತಿ ನೀಡಿದ್ದಾರೆ ತಕ್ಷಣ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಕೆಳಗಿಳಿದಿದ್ದಾರೆ ಈ ವೇಳೆ ಕಾರು ಬೆಂಕಿಗೆ ಆಹುತಿಯಾಗಿದೆ.
ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸುವ ಕೆಲಸವನ್ನು ಮಾಡಿದ್ದಾರೆ ಆಕಸ್ಮಿಕವಾಗಿ ಸಂಭವಿಸಿದ ದುರಂತದಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
Related Articles
ಇದನ್ನೂ ಓದಿ : ಅರ್ಚಕರ ನಿರ್ಲಕ್ಷ್ಯ : ದೇವರ ದರ್ಶಕ್ಕಾಗಿ ಕಾದು ಕಾದು ಸುಸ್ತಾದ ತೆಲುಗು ನಟ ನಾಗಿನೀಡು ಕುಟುಂಬ