ಶಿಡ್ಲಘಟ್ಟ : ದ್ವಿಚಕ್ರ ವಾಹನ ಸವಾರನೊಬ್ಬನನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರು ಕಾಲುವೆಯಲ್ಲಿ ಉರುಳಿ ಬಿದ್ದು ಕಾರಿನಲ್ಲಿದ್ದ ದಂಪತಿ ಆಶ್ಚರ್ಯಕರವಾಗಿ ಪಾರಾಗಿರುವ ಘಟನೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯ ಹೆಚ್.ಕ್ರಾಸ್ ಬಳಿ ಸಂಭವಿಸಿದೆ.
ಚಿಂತಾಮಣಿ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರಿಗೆ ದ್ವಿಚಕ್ರ ವಾಹನ ಅಡ್ಡ ಬಂದಿದೆ ಬೈಕ್ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದ್ದ ಕಾರ್ ಚಾಲಕ ನಿಯಂತ್ರಣ ತಪ್ಪಿ ಪಕ್ಕದ ಕಾಲುವೆಯಲ್ಲಿ ಪಲ್ಟಿ ಹೊಡೆದಿದೆ ಕಾರ್ ಜಖಂಗೊಂಡಿದ್ದು ಕಾರಿನಲ್ಲಿದ್ದ ಬೆಂಗಳೂರು ಮೂಲದ ಸುನೀಲ್ ಕುಮಾರ್ ಮತ್ತು ಅವರ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಘಟನಾ ಸ್ಥಳಕ್ಕೆ ಹೆಚ್.ಕ್ರಾಸ್ ಹೊರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ
ಕೋಲಾರ – ಸೋಂಪುರ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಗಾಯಗೊಂಡಿರುವ ದಂಪತಿಗಳ ಆರೋಗ್ಯವನ್ನು ವಿಚಾರಿಸಿ ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ : ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳ ನೆರವಿಗೆ ಸರಕಾರ ಬರಲಿ ಶಾಸಕ ಮಂಜುನಾಥ್ ಮನವಿ