Advertisement

ಶಿಡ್ಲಘಟ್ಟ: ವಿದ್ಯುತ್ ಸ್ಪರ್ಶದಿಂದ ಮಹಿಳೆ ಸಾವು

12:10 PM Jun 02, 2022 | Team Udayavani |

ಶಿಡ್ಲಘಟ್ಟ: ವಿದ್ಯುತ್ ಸ್ಪರ್ಶದಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿಯ ಸದ್ದಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದ ಆಂಜಿನಮ್ಮ( 55) ವರ್ಷ ಮೃತಪಟ್ಟ ದುರ್ದೈವಿ.

ಬೆಳಗ್ಗೆ ವಾಯುವಿಹಾರಕ್ಕೆ ಮನೆಯಿಂದ ಹೊರಗಡೆ ಬಂದಿದ್ದ ಮಹಿಳೆ ಕೈಗೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಹುಣಸೂರು: ಜಿಂಕೆಗೆ ಅಪರಿಚಿತ ವಾಹನ ಢಿಕ್ಕಿ

ಮನೆ ಹಿಂಭಾಗದಲ್ಲಿ ಫೆನ್ಸಿಂಗ್ ಮಾಡಲಾಗಿತ್ತು. ಅದಕ್ಕೆ ವಿದ್ಯುತ್ ಹರಿದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆ ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಬೆಸ್ಕಾಂ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next