Advertisement

ಶಿಡ್ಲಘಟ್ಟ: ಕಾರು ಢಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರ ಸ್ಥಿತಿ ಚಿಂತಾಜನಕ

10:27 PM Nov 20, 2022 | Team Udayavani |

ಶಿಡ್ಲಘಟ್ಟ: ಶಿಡ್ಲಘಟ್ಟ ಬೆಂಗಳೂರು ಮಾರ್ಗ ಮಧ್ಯದಲ್ಲಿರುವ ಕೇಶವವಾರ ಬಳಿ ದ್ವಿಚಕ್ರವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

Advertisement

ಗಾಯಾಳುಗಳನ್ನು ಶಿಡ್ಲಘಟ್ಟ ನಗರದ ಎರಡನೇ ಕಾರ್ಮಿಕ ನಗರದ ನಿವಾಸಿಗಳಾದ ನವಾಜ್ ಮತ್ತು ಶಾಹಿದ್ ಎಂದು ಗುರುತಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಜಯಪುರಕ್ಕೆ ತೆರಳುತ್ತಿದ್ದ ಕಾರು ಬೈಕ್ ಸವಾರರಿಗೆ ಢಿಕ್ಕಿ ಹೊಡೆದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸದೆ ಕಾರು ಸ್ಥಳದಲ್ಲೇ ಬಿಟ್ಟು ಪಲಾನಯನಗೊಂಡಿದ್ದಾರೆ.

ತೀವ್ರವಾಗಿ ಗಾಯಗೊಂಡು ನರಳುತ್ತಿದ್ದ ಬೈಕ್ ಸವಾರರನ್ನು ಮೇಲೂರು ಗ್ರಾಮದವರೊಬ್ಬರು ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಜಿಲ್ಲಾ ಆಸ್ಪತ್ರೆಗೆ ಕಳಿಸಲಾಗಿದೆ ಅಲ್ಲಿಯೂ ಉಪಚರಿಸಿದ ವೈದ್ಯರು ಬೇರೆ ಆಸ್ಪತ್ರೆಗೆ ತೆರಳಲು ಸಲಹೆ ನೀಡಿದ್ದಾರೆ.

ಪ್ರಸ್ತುತ ಇಬ್ಬರೂ ಗಾಯಳುಗಳ ಸ್ಥಿತಿ ಚಿಂತಾಜನಕವಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡುಯುತ್ತಿದ್ದಾರೆ ಎಂದು ತಿಳಿದುಬಂದಿದೆ.

Advertisement

ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾರು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅತಿ ವೇಗದಿಂದ ವಾಹನವನ್ನು ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದಲ್ಲದೆ ಗಾಯಲುಗಳನ್ನು ಕನಿಷ್ಠ ಆಸ್ಪತ್ರೆಗೆ ದಾಖಲಿಸಿದೆ ಅಮಾನವೀಯವಾಗಿ ಪರಾರಿಯಾಗಿರುವ ಕಾರು ಚಾಲಕ ಮತ್ತು ಮಾಲೀಕರ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next