ಚಿಕ್ಕಬಳ್ಳಾಪುರ: ಗೃಹಿಣಿಯೊಬ್ಬಳು ತನ್ನ ಎರಡು ಮಕ್ಕಳೊಂದಿಗೆ ಕೃಷಿ ಹೊಂಡದಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಡ್ಲಘಟ್ಟ ತಾಲ್ಲೂಕಿನ ಕೋಟಗಲ್ ಗ್ರಾಮದಲ್ಲಿ ನಡೆದಿದೆ.
ರಾಮಕೃಷ್ಣಪ್ಪ ಬಿನ್ ತಿಮ್ಮರೆಡ್ಡಿ ರವರ ಕೃಷಿಹೊಂಡದಲ್ಲಿ ಅದೇ ಗ್ರಾಮದ ಮೂರ್ತಿ ಎಂಬವರ ಪತ್ನಿ ಸರಸ್ಪತಮ್ಮ (27) ಮತ್ತು ಮಕ್ಕಳಾದ ನವ್ಯ (5), ನಿತ್ಯಶ್ರೀ (3) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂರ್ತಿ ಕುಡುಕನಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಣಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿ ಅದರಲ್ಲಿ ಇಬ್ಬರು ಮೃತಪಟ್ಟಿದ್ದು ಇನ್ನೊಂದು ಮಗುವಿನ ಶವಪತ್ತೆಯಾಗಿಲ್ಲ. ಘಟನೆಯ ಬಳಿಕ ಗಂಡ ಮೂರ್ತಿ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಗೃಹಣಿ ಮತ್ತು ಆಕೆಯ ಪುತ್ರಿಯ ಶವ ಹೊರತೆಗೆದಿದ್ದಾರೆ. ಮತ್ತೊಂದು ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.
ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.