Advertisement
ಜಿಲ್ಲೆಯ ಶಿಗ್ಗಾವಿ ತಾಲೂಕಿನ ನೀರಲಗಿ ಗ್ರಾಮದ ದ್ರಾಕ್ಷಾಯಿಣಿ ಪಾಟೀಲ ಅವರು ತಮ್ಮ 10 ಕಂತಿನ ಗೃಹಲಕ್ಷ್ಮಿ ಹಣ ಕೂಡಿಟ್ಟು, 20 ಸಾವಿರ ರೂ.,ಗಳಲ್ಲಿ ತಮ್ಮ ಸೊಸೆ ಕುಮಾರಿ ಶಿವನಗೌಡ ಪಾಟೀಲ್ ಗೆ ಮನೆಯಲ್ಲೇ ಫ್ಯಾನ್ಸಿ ಸ್ಟೋರ್ ಮಾಡಿ ಕೊಟ್ಟಿದ್ದಾರೆ. ಈ ಮೂಲಕ ಅತ್ತೆ-ಸೊಸೆ ಜೋಡಿ ಇತರರಿಗೆ ಮಾದರಿಯಾಗಿದ್ದಾರೆ.
Related Articles
Advertisement
ಒಟ್ಟಿನಲ್ಲಿ ಗೃಹಲಕ್ಷ್ಮೀ ಹಣ ಬಾರದ ಜನರು ಹಿಡಿಶಾಪ ಹಾಕಿದ್ದಾರೆ. ಅತ್ತೆಗೆ ಹಣ ಬಂದರೆ ಸೊಸೆ ಮುನಿಸು, ಸೊಸೆಗೆ ಹಣ ಬಂದರೆ ಅತ್ತೆಗೆ ಮುನಿಸು. ಈಗ ನಡುವೆ ಅತ್ತೆ ಹಣವನ್ನು ಗೃಹಲಕ್ಷ್ಮೀ ಹಣ ಕೂಡಿಯಿಟ್ಟು ಪ್ಯಾನ್ಸಿ ಸ್ಟೋರ್ ಪ್ರಾರಂಭ ಮಾಡುವ ಮೂಲಕ ಸೊಸೆಗೆ ಉದ್ಯೋಗಕ್ಕೆ ದಾರಿ ಮಾಡಿ ಕೊಟ್ಟಿದ್ದಾರೆ. ಅತ್ತೆ ದ್ರಾಕ್ಷಾಯಿಣಿ ಈ ಕಾರ್ಯಕ್ಕೆ ನೀರಲಗಿ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಗೃಹಲಕ್ಷ್ಮೀ ಯೋಜನೆ ನಮ್ಮಂತ ಬಡಕುಟುಂಬಳಿಗೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಕಳೆದ 10 ಕಂತಿನ ಗೃಹಲಕ್ಷ್ಮಿ ಹಣ ಕೂಡಿಟ್ಟು ಸೊಸೆಗೆ ಮನೆಯಲ್ಲೇ ಫ್ಯಾನ್ಸಿ ಸ್ಟೋರ್ ತೆರೆಯಲಾಗಿದೆ. ಇದರಿಂದಾಗಿ ಸೊಸೆ ಹೊರಗಡೆ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದುಕೊಂಡು ಉದ್ಯೋಗ ಮಾಡಬಹುದಾಗಿದೆ ಎಂದು ದ್ರಾಕ್ಷಾಯಿಣಿ ಪಾಟೀಲ್ ಹೇಳಿದರು.