Advertisement

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

08:51 PM Aug 27, 2024 | Team Udayavani |

ಹಾವೇರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯ ಹಣವನ್ನ ಕೂಡಿಟ್ಟ ಅತ್ತೆಯೊಬ್ಬರು ತಮ್ಮ ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟು ಬದುಕು ಕಟ್ಟಿಕೊಡುವ ಮೂಲಕ ಗಮನ ಸೆಳೆದಿದ್ದಾರೆ.

Advertisement

ಜಿಲ್ಲೆಯ ಶಿಗ್ಗಾವಿ ತಾಲೂಕಿನ ನೀರಲಗಿ ಗ್ರಾಮದ ದ್ರಾಕ್ಷಾಯಿಣಿ ಪಾಟೀಲ ಅವರು ತಮ್ಮ 10 ಕಂತಿನ ಗೃಹಲಕ್ಷ್ಮಿ ಹಣ ಕೂಡಿಟ್ಟು, 20 ಸಾವಿರ ರೂ.,ಗಳಲ್ಲಿ ತಮ್ಮ ಸೊಸೆ ಕುಮಾರಿ ಶಿವನಗೌಡ ಪಾಟೀಲ್‌ ಗೆ ಮನೆಯಲ್ಲೇ ಫ್ಯಾನ್ಸಿ ಸ್ಟೋರ್ ಮಾಡಿ ಕೊಟ್ಟಿದ್ದಾರೆ. ಈ ಮೂಲಕ ಅತ್ತೆ-ಸೊಸೆ ಜೋಡಿ ಇತರರಿಗೆ ಮಾದರಿಯಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರವು ರಾಜ್ಯದ ಹೆಣ್ಣು ಮಕ್ಕಳಿಗಾಗಿ ತನ್ನ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಾಗ ವಿರೋಧಿಗಳು ಅದರ ಬಗ್ಗೆ ಅಪಸ್ವರ ಎತ್ತಿದ್ದರು. ಆದರೆ ಈ ಅತ್ತೆ-ಸೊಸೆ ಜೋಡಿ ಗೃಹಲಕ್ಷ್ಮಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳುತ್ತಿದ್ದಾರೆ.

ಅತ್ತೆ ದ್ರಾಕ್ಷಾಯಿಣಿ ಗೃಹಲಕ್ಷ್ಮೀ ಯೋಜನೆ ಹಣದಲ್ಲಿ ಒಂದು ಪೈಸೆಯನ್ನೂ ಪೋಲು ಮಾಡದೆ ಕೂಡಿಟ್ಟು, 20 ಸಾವಿರಕ್ಕೂ ಹೆಚ್ಚು ಹಣ ಸಂಗ್ರಹಿಸಿ ಸೊಸೆಯ ಕೈಗೆ ಕೊಟ್ಟಿದ್ದಾರೆ. ಈ ಹಣದಲ್ಲಿ ಸೊಸೆ ಕುಮಾರಿ ಶಿವನಗೌಡ ಪಾಟೀಲ್ ಮನೆಯಲ್ಲೇ ನೂತನವಾಗಿ ಫ್ಯಾನ್ಸಿ ಸ್ಟೋರ್ ತೆರೆದಿದ್ದಾರೆ. ಶ್ರಾವಣ ಮಾಸದ ಮಂಗಳವಾರದ ಶುಭದಿನದಂದೇ ಫ್ಯಾನ್ಸಿ ಸ್ಟೋರ್ ಗೆ ಪೂಜೆ ಮಾಡಿ ಚಾಲನೆ ನೀಡಲಾಗಿದೆ. ಅತ್ತೆ-ಸೊಸೆ ಸಂಭ್ರಮದಿಂದ ಫ್ಯಾನ್ಸಿ ಸ್ಟೋರ್ ಶುರು ಮಾಡಿದ್ದಾರೆ.

Advertisement

ಒಟ್ಟಿನಲ್ಲಿ ಗೃಹಲಕ್ಷ್ಮೀ ಹಣ ಬಾರದ ಜನರು ಹಿಡಿಶಾಪ ಹಾಕಿದ್ದಾರೆ. ಅತ್ತೆಗೆ ಹಣ ಬಂದರೆ ಸೊಸೆ ಮುನಿಸು, ಸೊಸೆಗೆ ಹಣ ಬಂದರೆ ಅತ್ತೆಗೆ ಮುನಿಸು. ಈಗ ನಡುವೆ ಅತ್ತೆ ಹಣವನ್ನು ಗೃಹಲಕ್ಷ್ಮೀ ಹಣ ಕೂಡಿಯಿಟ್ಟು ಪ್ಯಾನ್ಸಿ ಸ್ಟೋರ್ ಪ್ರಾರಂಭ ಮಾಡುವ ಮೂಲಕ ಸೊಸೆಗೆ ಉದ್ಯೋಗಕ್ಕೆ ದಾರಿ ಮಾಡಿ‌ ಕೊಟ್ಟಿದ್ದಾರೆ. ಅತ್ತೆ ದ್ರಾಕ್ಷಾಯಿಣಿ ಈ ಕಾರ್ಯಕ್ಕೆ ನೀರಲಗಿ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಗೃಹಲಕ್ಷ್ಮೀ ಯೋಜನೆ ನಮ್ಮಂತ ಬಡಕುಟುಂಬಳಿಗೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಕಳೆದ 10 ಕಂತಿನ ಗೃಹಲಕ್ಷ್ಮಿ ಹಣ ಕೂಡಿಟ್ಟು ಸೊಸೆಗೆ ಮನೆಯಲ್ಲೇ ಫ್ಯಾನ್ಸಿ ಸ್ಟೋರ್ ತೆರೆಯಲಾಗಿದೆ. ಇದರಿಂದಾಗಿ ಸೊಸೆ ಹೊರಗಡೆ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದುಕೊಂಡು ಉದ್ಯೋಗ ಮಾಡಬಹುದಾಗಿದೆ ಎಂದು ದ್ರಾಕ್ಷಾಯಿಣಿ ಪಾಟೀಲ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next