ಲಂಡನ್ : ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಗಾಯಾಳಾಗಿ ಐಸಿಸಿ ವಿಶ್ವಕಪ್‌ನ 2 ಪ್ರಮುಖ ಪಂದ್ಯಗಳಿಗೆ ತಂಡದಿಂದ ಹೊರಗುಳಿಯಬೇಕಾಗಿದೆ.
ಭಾನುವಾರ ಆಸ್ಟ್ರೇಲಿಯಾ ತಂಡದ ವಿರುದ್ಧ ನಡೆದ ಪಂದ್ಯದ ವೇಳೆ ಧವನ್ ಗಾಯಗೊಂಡಿದ್ದರು. ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಅವರು 117 ರನ್‌ಗಳಿಸಿ ಗೆಲುವಿನಲ್ಲಿ ಮಹತ್ವದ ಕೊಡುಗೆ ಸಲ್ಲಿಸಿದ್ದರು.ಧವನ್ ಅವರ ಹೆಬ್ಬೆರಳಿಗೆ ಗಾಯವಾಗಿದ್ದು ಕೆಲ ದಿನಗಳ ವಿಶ್ರಾಂತಿ ಅಗತ್ಯವಿರುವ ಹಿನ್ನಲೆಯಲ್ಲಿ 2 ಪಂದ್ಯಗಳಿಗೆ ಆಡುವ ಬಳಗದಿಂದ ಕೈ ಬಿಡಬೇಕಾಗಿದೆ ಎಂದು ತಿಳಿದು ಬಂದಿದೆ.
ಬದ್ಧ ವೈರಿ ಪಾಕಿಸ್ಥಾನ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯಗಳಲ್ಲಿ ಧವನ್ ಅವರು ಆಡುವುದಿಲ್ಲ.
ಧವನ್ ಬದಲಿಗೆ ಕೆ.ಎಲ್.ರಾಹುಲ್ ಅವರು ರೋಹಿತ್ ಶರ್ಮಾ ಅವರೊಂದಿಗೆ ಆರಂಭಿನಾಗಿ ಆಡುವ ಸಾಧ್ಯತೆಗಳಿವೆ.ದಿನೇಶ್ ಕಾರ್ತಿಕ್ ಅಥವಾ ವಿಜಯ್ ಶಂಕರ್ ಅವರು ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ.
ಈ ಮೊದಲು ಧವನ್ ವಿಶ್ವಕಪ್‌ನಿಂದ ಹೊರ ಬಿದ್ದಿದ್ದರು ಎನ್ನುವುದಾಗಿ ಹೇಳಲಾಗಿತ್ತು, ಧವನ್‌ಗೆ 3 ವಾರಗಳ ವಿಶ್ರಾಂತಿ ಅಗತ್ಯವಿದೆ ಎನ್ನಲಾಗಿತ್ತು. ಇದುವರೆಗೆ ಬಿಸಿಸಿಐ ಯಾವುದೇ ಪ್ರಕಟಣೆ ನೀಡಿಲ್ಲ. ಆದರೆ ಈಗ 2 ಪಂದ್ಯಗಳ ಕಾಲ ಮಾತ್ರ ತಂಡದಿಂದ ಹೊರಗುಳಿಯಲಿದ್ದಾರೆ ಎನ್ನುವುದು ತಿಳಿದು ಬಂದಿದೆ.