Advertisement

Shiksha Prabha Academy ಕುಂದಾಪುರ: ಸಿಎ ಫಲಿತಾಂಶದಲ್ಲಿ ಶ್ರೇಷ್ಠ ಸಾಧನೆ

08:16 PM Jan 12, 2024 | Team Udayavani |

ಕುಂದಾಪುರ: ಹೆಸರಾಂತ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನವೆಂಬರ್ 2023ರಲ್ಲಿ ನೆಡೆಸಿದ ಸಿಎ ಫೈನಲ್ ಮತ್ತು ಸಿಎ ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ಅತ್ಯುತ್ತಮ ಸಾಧನೆಗೈದಿದ್ದಾರೆ.

Advertisement

ಸಿಎ/ಸಿಎಸ್ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ತರಬೇತಿ ನೀಡುವುದರಲ್ಲಿ ಮುಂಚೂಣಿಯಲ್ಲಿರುವ ಕುಂದಾಪುರದ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ವಿದ್ಯಾರ್ಥಿಯಾದ ಷಣ್ಮುಖ ಕೆ. ಎಸ್.(256) ಸಿಎ ಅಂತಿಮ ಪರೀಕ್ಷೆಯನ್ನು ತೇರ್ಗಡೆ ಹೊಂದುವುದರ ಮೂಲಕ ಲೆಕ್ಕ ಪರಿಶೋಧಕರಾಗಿ ಹೊರಹೊಮ್ಮಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಯಾದ ಧನುಷ್ 518 ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಎರಡು ಹಂತದ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದುವುದರ ಮೂಲಕ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ಆಯೆಷಾ ತುಬಾ(260), ವೈಷ್ಣವಿ ಶೆಟ್ಟಿ (249), ಅಮೃತ (234), ಕೆ.ಆರ್.‌ ದೀಕ್ಷಾ (228) ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯೆಟ್ ದ್ವಿತೀಯ ಗ್ರೂಪ್ ಪರೀಕ್ಷೆಯನ್ನು ತೇರ್ಗಡೆ ಹೊಂದುದರ ಮೂಲಕ ಸಿಎ ಅಂತಿಮ ಹಂತಕ್ಕೆ ಪ್ರವೇಶ ಪಡೆದಿದ್ದಾರೆ. ಶೃದ್ಧಾ ಬಿ. ಸಾಲ್ಯಾನ್(270)‌, ಪಂಚಮಿ ಕಿಣಿ (261), ರಕ್ಷಿತಾ (235), ಸುದೀಪ್‌ರಾಜ್(227)‌, ಕಿಶನ್‌ ಅಡಿಗ (216), ವೈಷ್ಣವಿ ವಿ. ಮೊಪಗಾರ್‌ (216), ರೋಹಿತ್‌ ಆಚಾರ್ಯ(210), ಸುಶ್ಮಿತಾ ಉದಯ್‌ ಪೂಜಾರಿ (203), ಮತ್ತು ಶ್ರೀಜಿತ್ (200) ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಮೊದಲ ಗ್ರೂಪ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಶಿಕ್ಷ ಪ್ರಭ ಅಕಾಡೆಮಿಯು ಕಳೆದ ಕೆಲವು ವರ್ಷಗಳಿಂದ ಸಿಎ ಮತ್ತು ಸಿಎಸ್ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಾ ಬಂದಿದ್ದು ಅನೇಕ ವಿದ್ಯಾರ್ಥಿಗಳು ಸಿಎ/ಸಿಎಸ್ ನ ಎಲ್ಲಾ ಹಂತದ ಪರೀಕ್ಷೆಯಲ್ಲೂ ಉತ್ತೀರ್ಣರಾಗಿ ದೇಶದ ನಾನಾ ಭಾಗಗಳಲ್ಲಿ ಉದ್ಯೋಗದಲ್ಲಿದ್ದಾರೆ. ಸಂಸ್ಥೆಯಲ್ಲಿ ಬೋಧಕ ಸಿಬಂದಿಗಳಾಗಿ ಆಗಮಿಸುವ ಅನುಭವಿ ಲೆಕ್ಕ ಪರಿಶೋಧಕರು, ತರಬೇತುದಾರರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ನೀಡುವುದರ ಪರಿಣಾಮ ಪ್ರತಿ ಬ್ಯಾಚ್‌ನಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಯಿತು. ಬೋಧಕ ಸಿಬಂದಿ ವರ್ಗದವರಿಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್‌ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next