Advertisement

ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟಿ ಶಿಲ್ಪಾ ಶೆಟ್ಟಿ

10:11 PM Jul 29, 2021 | Team Udayavani |

ಮುಂಬೈ: ನೀಲಿ ಸಿನಿಮಾ ನಿರ್ಮಾಣ ಪ್ರಕರಣದಡಿ ತಮ್ಮ ಪತಿ ರಾಜ್ ಕುಂದ್ರಾ ಬಂಧನದ ನೋವಿನಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಇದೀಗ ಮಾಧ್ಯಮಗಳ ವಿರುದ್ಧ ಕಾನೂನು ಹೋರಾಟ ನಡೆಸಿದ್ದಾರೆ.

Advertisement

ಪತಿ ರಾಜ್‌ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ ಎಂದು ಶಿಲ್ಪಾ ಶೆಟ್ಟಿ ಆರೋಪಿಸಿದ್ದಾರೆ. ಜೊತೆಗೆ 29 ಮಾಧ್ಯಮ ಸಿಬ್ಬಂದಿ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇನ್ನು ನೀಲಿ ಸಿನಿಮಾ ನಿರ್ಮಾಣ ಹಾಗೂ ಅವುಗಳನ್ನು ಆ್ಯಪ್ ಮೂಲಕ ವಿತರಣೆ ಪ್ರಕರಣದಡಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು.  ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ಈ ದಂಧೆಯಲ್ಲಿ ನಟಿ ಶಿಲ್ಪಾ ಶೆಟ್ಟಿಯವರದು ಪಾತ್ರ ಇದೆಯಾ ? ಎನ್ನುವ ಅನುಮಾನದಲ್ಲಿ ಅವರನ್ನೂ ಕೂಡ ವಿಚಾರಣೆಗೆ ಒಳಪಡಿಸಲಾಯಿತು. ಆದರೆ, ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯವರ ಪಾತ್ರ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next