Advertisement

ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

09:14 AM Jul 20, 2021 | Team Udayavani |

ಮುಂಬೈ: ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಕ್ರೈಮ್ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.

Advertisement

ಅಶ್ಲೀಲ ವಿಡಿಯೋಗಳ ನಿರ್ಮಾಣ, ಚಿತ್ರೀಕರಣ ಮತ್ತು ಕೆಲವು ಆ್ಯಪ್ ಗಳಲ್ಲಿ ಅವುಗಳನ್ನು ಪೋಸ್ಟ್ ಮಾಡಿದ ಆರೋಪ ರಾಜ್ ಕುಂದ್ರಾ ಮೇಲಿದೆ. ಕುಂದ್ರಾ ವಿರುದ್ಧದ ನಮಗೆ ಸಾಕಷ್ಟು ಪುರಾವೆಗಳು ಸಿಕ್ಕಿವೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ ಪೊಲೀಸರ ಅಪರಾಧ ವಿಭಾಗವು ಅಶ್ಲೀಲ ಚಿತ್ರ ದಂಧೆಯನ್ನು ಬಹಿರಂಗಪಡಿಸಿದೆ, ಯುವತಿಯರಿಗೆ ಸಿನಿಮಾ ರಂಗದಲ್ಲಿ ಅವಕಾಶ ನೀಡುವ ನೆಪದಲ್ಲಿ ಅಶ್ಲೀಲ ವಿಡಿಯೋಗಳಿಗೆ ಬಳಕೆ ಮಾಡಲಾಗುತ್ತಿತ್ತು. ನಂತರ ಈ ವೀಡಿಯೊಗಳನ್ನು ಅಶ್ಲೀಲ ಸೈಟ್‌ಗಳು ಮತ್ತು ಮೊಬೈಲ್ ಅಪ್ಲಿಕೇಶನ್‌ಗಳಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.

ಇದನ್ನೂ ಓದಿ:BSY ಜತೆ ಸಮುದಾಯ : ಬದಲಾವಣೆ ಕೆಂಡಕ್ಕೆ “ಆಡಿಯೋ’ ತುಪ್ಪ : ಬಿಎಸ್‌ವೈ ಮೌನ

ಅಪರಾಧ ವಿಭಾಗದ ಪ್ರಾಪರ್ಟಿ ಸೆಲ್ ಅಧಿಕಾರಿಗಳು ಒಟ್ಟು ಐದು ಜನರನ್ನು ಬಂಧಿಸಿದ್ದಾರೆ. ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಇಬ್ಬರು ನಟರಾಗಿ ಕೆಲಸ ಮಾಡುತ್ತಿದ್ದರೆ, ಇನ್ನೊಬ್ಬ ವ್ಯಕ್ತಿ ಲೈಟ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಬಂಧಿತ ಇಬ್ಬರು ಮಹಿಳೆಯರು ಫೋಟೊಗ್ರಾಫರ್ / ವಿಡಿಯೋಗ್ರಾಫರ್ ಮತ್ತು ಗ್ರಾಫಿಕ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next