ಶಿವಮೊಗ್ಗ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ವಿತರಿಸಲು 28,000 ಮಾಸ್ಕ್ ಗಳನ್ನು ಸಚಿವ ಸುರೇಶ್ ಕುಮಾರ್ ಅವರಿಗೆ ಹಸ್ತಾಂತರಿಸಲಾಯಿತು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಅಧ್ಯಕ್ಷ ಕೆ.ಬಿ. ಶಿವಕುಮಾರ, ಸಚಿವ ಸುರೇಶ್‌ಕುಮಾರ್ ಹಾಗೂ ಡಿಡಿಪಿಐ ಎನ್.ಎಂ. ರಮೇಶ್
ಅವರಿಗೆ ಮಾಸ್ಕ್ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಎಸ್. ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಲ್ಲಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು 379 ಸ್ಕೌಟರ್ ಮತ್ತು ಗೈಡರ್ಗಳ ಪಟ್ಟಿಯನ್ನು ಜಿಲ್ಲಾ ಸಂಸ್ಥೆ ತಲುಪಿಸಿದೆ. ಆ ಪ್ರಕಾರ ಅವರುಗಳನ್ನು ಸೇವೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಉಪನಿರ್ದೇಶಕರು ತಿಳಿಸಿದರು.
ಈ ವೇಳೆ ಜಿಲ್ಲಾ ಮುಖ್ಯ ಆಯುಕ್ತ ಎಚ್ .ಡಿ. ರಮೇಶ ಶಾಸ್ತ್ರಿ, ಜಿಲ್ಲಾ ಆಯುಕ್ತೆ (ಗೈಡ್ಸ್) ಶಕುಂತಲ ಚಂದ್ರಶೇಖರ್, ಜಿಲ್ಲಾ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಕೆ.ಪಿ. ಬಿಂದುಕುಮಾರ್, ಜಿಲ್ಲಾ ಖಜಾಂಚಿ ಚೂಡಾಮಣಿ ಇ ಪವಾರ್, ಜಿಲ್ಲಾ ಸಹಕಾರ್ಯದರ್ಶಿ ವೈ.ಆರ್. ವೀರೇಶಪ್ಪ, ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಜಿ.ವಿಜಯ್ ಕುಮಾರ್, ಜಿಲ್ಲಾ ಸಂಸ್ಥೆಯ ಇತರೆ ಪದಾಧಿಕಾರಿಗಳು, ಜಿಲ್ಲೆಯ 7 ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು, ಸ್ಕೌಟರ್, ಗೈಡರ್, ರೋವರ್ ಸ್ಕೌಟ್ ಲೀಡರ್, ರೇಂಜರ್ ಲೀಡರ್, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಉಪಸ್ಥಿತರಿದ್ದರು.