Advertisement

Shimoga; ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ವಿಡಿಯೋ ವೈರಲ್

12:14 PM Dec 28, 2023 | keerthan |

ಶಿವಮೊಗ್ಗ: ಮಕ್ಕಳ ಕೈಯಲ್ಲಿ ಶೌಚಾಲಯ ಕ್ಲೀನ್ ಮಾಡಿಸುತ್ತಿರುವ ಮತ್ತೊಂದು ಘಟನೆ ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ನಡೆದಿದೆ.

Advertisement

ಮಕ್ಕಳು ಶೌಚಾಲಯ ಬರಿಗೈನಲ್ಲಿ ಟಾಯ್ಲೆಟ್‌ ಕ್ಲೀನ್‌ ಮಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ. ಭದ್ರಾವತಿ ತಾಲ್ಲೂಕಿನ ಕೋಮಾರನಹಳ್ಳಿ ಗ್ರಾಪಂ ವ್ಯಾಪ್ತಿಯ ಗುಡ್ಡದ ನೇರಲಕೆರೆ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಶಾಲೆಗಳಲ್ಲಿ ಕ್ಲೀನಿಂಗ್‌ಗೆ ಡಿ ಗ್ರೂಪ್‌ ಸಿಬ್ಬಂದಿ ನೇಮಕ ಸಂಬಂಧ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದರು. ಮಕ್ಕಳ ಕೈಯಲ್ಲಿ ಕ್ಲೀನಿಂಗ್‌ ಮಾಡಿಸದಂತೆ ಸಹ ಸೂಚನೆ ನೀಡಿದ್ದರು. ಆದರೆ ಇದಾದ ಮೇಲೂ ಇಂತಹದ್ದೆ ಘಟನೆ ಮತ್ತೆ ವರದಿಯಾಗಿದೆ

ಸತ್ಯಾಸತ್ಯತೆ ಬಗ್ಗೆ ವರದಿ ಕೇಳಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಡಿಡಿಪಿಐ ಪರಮೇಶ್ವರಪ್ಪ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next