Advertisement

ಶಿವಮೊಗ್ಗ: ಬಜರಂಗದಳ ಸಹ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ; ಮೂವರು ಪೊಲೀಸರ ವಶಕ್ಕೆ

02:16 PM Jul 12, 2022 | Team Udayavani |

ಶಿವಮೊಗ್ಗ: ಹರ್ಷ ಹತ್ಯೆಯ ನಂತರ ತಣ್ಣಗಾಗಿದ್ದ ಶಿವಮೊಗ್ಗದಲ್ಲಿ ಇದೀಗ ಮತ್ತೊಂದು ಘಟನೆ ನಡೆದಿದೆ. ಬಜರಂಗದಳ ಸಹ ಸಂಚಾಲಕ ಹಾಗೂ ಬಿಜೆಪಿ ಮುಖಂಡ ಕಾಂತರಾಜು ಎಂಬಾತನ ಮೇಲೆ ಸೋಮವಾರ ರಾತ್ರಿ ಮಾರಣಾಂತಿಕ ದಾಳಿ ಮಾಡಲಾಗಿದೆ.

Advertisement

ರಾಜೀವ್ ಗಾಂಧಿ ಬಡಾವಣೆಯ ಮೊದಲನೇ ತಿರುವಿನಲ್ಲಿ ಮೂತ್ರ ವಿಸರ್ಜನೆಗೆಂದು ಹೋಗಿದ್ದ ಯುವಕ ಕಾಂತರಾಜು (27) ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ.

ಮೂತ್ರ ವಿಸರ್ಜನೆಗೆಂದು ಕಾಂತರಾಜು ಮನೆಯಿಂದ ಹೊರ ಬಂದಾಗ ಮಚ್ಚು ಮತ್ತು ಬ್ಯಾಟ್ ನಿಂದ ದಾಳಿ ನಡೆಸಲಾಗಿದೆ. ಆದರೆ ಕಾಂತರಾಜು ಸಿನಿಮಾ ಶೈಲಿಯಲ್ಲಿ ಅವರ ಆಯುಧಗಳನ್ನೇ ಕಸಿದುಕೊಂಡಿದ್ದಾರೆ. ಸ್ನೇಹಿತರು, ಕುಟುಂಬದವರು ಬಂದೊಡನೆ‌ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ:ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಬಸ್‌; ಪ್ರಯಾಣಿಕರು ಪಾರು

ಕಾಂತರಾಜುವಿನ ಬಲಗೈ ಗೆ ಮಚ್ಚಿನಿಂದ ಏಟು ಬಿದ್ದಿದೆ. ದಾಳಿ ನಡೆಸಿದವರು ಅನ್ಯಕೋಮಿನ ಹುಡುಗರು ಎಂದು ಆರೋಪಿಸಲಾಗಿದೆ. ಸದ್ಯ ಗಾಯಗೊಂಡಿರುವ ಕಾಂತರಾಜು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂವರು ವಶಕ್ಕೆ: ಘಟನೆ ಬೆನ್ನಿಗೆ ಶಿವಮೊಗ್ಗ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಅವರ ವಿಚಾರಣೆ ನಡೆಸಲಾಗುತ್ತಿದೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು, ಮಚ್ಚಿನಿಂದ ಹಲ್ಲೆಯಾಗಿದೆ. ಮೂರರಿಂದ ಐವರು ಮಂದಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಮೂವರನ್ನು ಈಗಾಗಲೆ ವಶಕ್ಕೆ ಪಡೆದಿದ್ದೇವೆ. ತನಿಖೆ ನಡೆಯುತ್ತಿದೆ. ಆರಂಭದಲ್ಲಿ ದುಡ್ಡಿನ ವಿಚಾರ ಎಂದು ಹೇಳಿದ್ದರು. ಆದರೆ ತನಿಖೆ ಪ್ರಕಾರ ಬಜರಂಗದಳ ಸಂಘಟನೆ ಚಟುವಟಿಕೆಯಲ್ಲಿ ಇದ್ದಿದ್ದರಿಂದ ಈ ಹಲ್ಲೆಯಾಗಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ ಪದೇ ಪದೆ ಇಂತಹ ಘಟನೆಗಳು ನಡೆಯುತ್ತಿವೆ. ಆದ್ದರಿಂದ ನಮ್ಮ ಪ್ಯಾಟ್ರೋಲಿಂಗ್ ಹೆಚ್ಚಳ ಮಾಡಿದ್ದೇವೆ. ಅಲ್ಲಲ್ಲಿ ಚೆಕ್ ಪೋಸ್ಟ್ ಹಾಕಲಾಗಿದೆ. ಸಮಸ್ಯೆ ಉಂಟು ಮಾಡುವವರ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನಿಗಾ ವಹಿಸಲಾಗುತ್ತದೆ  ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next