Advertisement

Shimoga; ಶಾಸಕರ ವಿರುದ್ಧ ಪೋಸ್ ಮಾಡಿದ ಭದ್ರಾವತಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

09:45 AM Dec 11, 2023 | keerthan |

ಶಿವಮೊಗ್ಗ: ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ರವಿವಾರ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ.

Advertisement

ಭದ್ರಾವತಿಯ ಸಿದ್ದಾಪುರದ ವಿಶ್ವೇಶ್ವರಯ್ಯ ಲೇಔಟ್ ನಿವಾಸಿ, ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತನಾಗಿರುವ ಗೋಕುಲ್ ಹಲ್ಲೆಗೊಳಗಾದವರು.

ಭದ್ರಾವತಿಯಲ್ಲಿ ಇಸ್ಪಿಟ್ ಹಾವಳಿ ಹೆಚ್ಚಾಗಿದೆ ಎಂದು ಗೋಕುಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಗೆಲ್ಲುವ ಮುಂಚೆ ಯುವಕರಿಗೆ ಉದ್ಯೋಗ ಕೊಡಿಸುತ್ತೇನೆ, ಎಂಪಿಎಂ ಪ್ರಾರಂಭಿಸುತ್ತೇನೆ ಎಂದ ಶಾಸಕರೇ ಈಗ ಯಾಕೆ ಇಸ್ಪಿಟ್ ಹಾವಳಿ ತಡೆಗಟ್ಟುತ್ತಿಲ್ಲಎಂದು ಭದ್ರಾವತಿ ಶಾಸಕ ಸಂಗಮೇಶ್ ಅವರನ್ನು ಪ್ರಶ್ನಿಸಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ:Baradi Kambala: 3 ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಕೃತಿಕ್ ಗೌಡ; ಇಲ್ಲಿದೆ ಫಲಿತಾಂಶ ಪಟ್ಟಿ

ಪೋಸ್ಟ್ ಮಾಡಿರುವುದನ್ನು ಖಂಡಿಸಿ, ಬೆಳಿಗ್ಗೆ ಗೋಕುಲ್ ಕಾರಿನ ಮೇಲೆ ಹಲ್ಲೆ ನಡೆಸಲಾಗಿತ್ತು. ಗೋಕುಲ್ ಕಾರಿನ ಗಾಜು ಹೊಡೆದಿದ್ದರು. ರಾತ್ರಿ ಕಿಡಿಗೇಡಿಗಳು ಗೋಕುಲ್ ಮೇಲೆ ಹಲ್ಲೆ ಮಾಡಿದ್ದಾರೆ. ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದ್ದು, ತಲೆ ಹಾಗೂ ಕಿವಿಗೆ ಗಾಯವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next