Advertisement
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿರುವ ಜಲಾಶಯ ಬಹುತೇಕ ಭರ್ತಿ ಹಿನ್ನೆಲೆ ಮೂರು ಗೇಟ್ ಗಳ ಮೂಲಕ ಅಧಿಕಾರಿಗಳು ನದಿಗೆ ನೀರು ಬಿಟ್ಟಿದ್ದಾರೆ. 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
Related Articles
Advertisement
ಸಾಗರ ಕ್ಷೇತ್ರದಲ್ಲಿ 100 ಮನೆಗಳು ಕುಸಿದು ಬಿದ್ದಿವೆ. ಸದ್ಯ 10 ಸಾವಿರ ಪರಿಹಾರ ಕೊಟ್ಟಿದ್ದೇವೆ. ಜೋಗ ಜಲಪಾತ ಅಭಿವೃದ್ಧಿಗೆ 183 ಕೋಟಿ ಬಿಡುಗಡೆ ಆಗಿತ್ತು. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಒಂದೇ ಒಂದು ರೂಪಾಯಿ ಹಣ ಬಿಡುಗಡೆ ಮಾಡಲಿಲ್ಲ. ಸಂಸದ ರಾಘವೇಂದ್ರ ಸುಮ್ಮನೆ ಬೊಗಳೆ ಬಿಟ್ಟರು. ನಮ್ಮ ಸರಕಾರ ಬಂದ ಮೇಲೆ 95 ಕೋಟಿ ಹಣ ಬಿಡುಗಡೆ ಮಾಡಿದೆ ಎಂದರು.
ಬಿಜೆಪಿ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಪಾದಯಾತ್ರೆ ಗೊಂದಲಕ್ಕೆ ಕಾರಣವಾಗಿದೆ. ಪಾದಯಾತ್ರೆ ಮಾಡುವ ಅವಶ್ಯಕತೆ ಇಲ್ಲ. ಯತ್ನಾಳ್ ನಾನೊಂದು ಕಡೆ ಪಾದಯಾತ್ರೆ ಮಾಡುತ್ತೇನೆ ಎನ್ನುತ್ತಾರೆ, ಜಾರಕಿಹೊಳಿ ನಾನೊಂದು ಕಡೆ ಪಾದಯಾತ್ರೆ ಮಾಡ್ತೀನಿ ಅಂತಾರೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪ್ರಬಲವಾಗುತ್ತದೆಂಬ ಕಾರಣಕ್ಕೆ ಕುಮಾರಸ್ವಾಮಿ ನಾನು ಬೆಂಬಲ ಕೊಡಲ್ಲ ಎನ್ನುತ್ತಿದ್ದಾರೆ. ಬಿಜೆಪಿ ಶಕ್ತಿ ಪ್ರದರ್ಶನಕ್ಕಾಗಿ ಪಾದಯಾತ್ರೆ ಮಾಡುತ್ತಿದೆ ಅಷ್ಟೇ ಎಂದರು.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಮಾತನಾಡಿ, ಏನಪ್ಪ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲಾ ಹಾಗೆ ಮಾತನಾಡುತ್ತಿದ್ದಾರೆ. ನಿಮ್ಮ ಮಾಧ್ಯಮಗಳಲ್ಲಿ ಹಾಗೆ ಬರುತ್ತಿದೆ ನೋಡಿದ್ದೇನೆ ಅಷ್ಟೇ ಎಂದರು.
ಶರಾವತಿ ನೀರು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ವಿಚಾರವಾಗಿ ಮಾತನಾಡಿ, ಕುಡಿಯುವ ನೀರಿಗೆ ಕೊಡಲು ಯಾರ ವಿರೋಧವೂ ಇಲ್ಲ. ಶರಾವತಿ ಮುಳುಗಡೆ ಪ್ರದೇಶದವರಿಗೆ 24 ಗಂಟೆ ವಿದ್ಯುತ್ ಕೊಟ್ಟರೆ ನೀರು ತೆಗೆದುಕೊಂಡು ಹೋಗಿ ನಿರಂತರ ವಿದ್ಯುತ್ ಕೊಟ್ಟರೆ ನಮ್ಮ ವಿರೋಧ ಇಲ್ಲ ಎಂದು ಹೇಳಿದರು.