Advertisement

ಶಿವಮೊಗ್ಗದ ಚೂರಿ ಇರಿತ ಪ್ರಕರಣ; ಆರೋಪಿಗೆ ಉಗ್ರ ನಂಟು ಇದೆ: ಆರಗ ಜ್ಞಾನೇಂದ್ರ

05:50 PM Sep 03, 2022 | Team Udayavani |

ಶಿವಮೊಗ್ಗ :” ಪ್ರೇಮ್ ಸಿಂಗ್ ಚೂರಿ ಇರಿತ ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾ ಲಿಂಕ್ ಭಯಾನಕವಾಗಿದ್ದು, ಉಗ್ರರ ಜತೆ ಸಂಬಂಧ ಇರುವುದು ಬಹಿರಂಗವಾಗುತ್ತಿದೆ. ಸದ್ಯದಲ್ಲೇ ಈ ಪ್ರಕರಣವನ್ನು ಎನ್ ಐಎ ಗೆ ಹಸ್ತಾಂತರ ಮಾಡುತ್ತೇವೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಶಾಂತಿಗಾಗಿ ಕಾಲ್ನಡಿಗೆ ಜಾಥಾ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ”ಶಿವಮೊಗ್ಗ ಸಂಪೂರ್ಣ ಶಾಂತಿಯುತವಾಗಿದೆ.ಆಗಾಗ ಆಕಸ್ಮಿಕ ಘಟನೆಗಳು ನಡೆಯುತ್ತವೆ ಅಷ್ಟೇ. ರಾಜಕೀಯ ಪಕ್ಷ ಹೊರತುಪಡಿಸಿ ಕಾರ್ಯಕ್ರಮ ನಡೆಯುತ್ತಿದೆ” ಎಂದರು.

ಮುರುಘಾ ಶ್ರೀ ಬಂಧನ‌ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಪೊಲೀಸರು ತನಿಖೆ ಮಾಡುತ್ತಿದ್ದಾರೆ.ಇದರಲ್ಲಿ ಸರಕಾರ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆ ದೃಷ್ಟಿಯಿಂದ ಹೆಚ್ಚಿಗೆ ಏನನ್ನೂ ಹೇಳುವುದಿಲ್ಲ. ಮುರುಘಾ ಮಠಕ್ಕೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದ್ದು, 7 ಕೆಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ” ಎಂದರು.

ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ”ರಾಜ್ಯದ ಬಗ್ಗೆ ಮೋದಿಯವರಿಗೆ ವಿಶೇಷ ಆಸಕ್ತಿ ಇದೆ. ತಿಂಗಳಿಗೊಮ್ಮೆ ಭೇಟಿ ನೀಡುವುದಾಗಿ‌ ಹೇಳಿದ್ದಾರೆ. ಚುನಾವಣೆಗೆ ನಾವು ಸಿದ್ದರಾಗಿದ್ದೇವೆ. ಸೆ.8 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ನಡೆಯಲಿದೆ” ಎಂದರು.

ಮೋದಿ ಭೇಟಿ ಬಗ್ಗೆ ಹೆಚ್ ಡಿಕೆ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಒಬ್ಬ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕೋ ಅದನ್ನು ಮೋದಿ ಮಾಡುತ್ತಾರೆ. ಮಾಜಿ ಸಿಎಂ ಆಗಿ ಅವರ ಹೇಳಿಕೆ ಸರಿಯಲ್ಲ.ಮಳೆ ಹಾನಿಗೆ ಸರಕಾರ ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಂಡಿದೆ” ಎಂದರು.

Advertisement

ಯಡಿಯೂರಪ್ಪ ಅವರಿಗೆ ಸ್ಥಾನಮಾನ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಯಡಿಯೂರಪ್ಪ ಅವರಿಗೆ ಪಕ್ಷ ಗೌರವ ಸಲ್ಲಿಸಿದೆ. ರಾಜ್ಯಾದ್ಯಂತ ಪ್ರವಾಸಕ್ಕೆ ಅವರು ಸಿದ್ದರಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಸ್ಥಾನ ಸಿಗಲಿದೆ” ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next