Advertisement

ಚನ್ನಪ್ಪ ಲೇಔಟ್‌ ಸೀಲ್‌ಡೌನ್

12:54 PM Jun 27, 2020 | Naveen |

ಶಿವಮೊಗ್ಗ: ವ್ಯಕ್ತಿಯೊಬ್ಬರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದ ಚನ್ನಪ್ಪ ಲೇಔಟ್‌ನ ಅಡ್ಡರಸ್ತೆಯೊಂದನ್ನು ಸೀಲ್‌ಡೌನ್‌ ಮಾಡಲಾಗಿದೆ. ಮೂರು ಕಡೆ ಬ್ಯಾರಿಕೇಡ್‌ ಹಾಕಲಾಗಿದೆ.

Advertisement

ಚನ್ನಪ್ಪ ಲೇಔಟ್‌ನ ಎರಡನೇ ಅಡ್ಡರಸ್ತೆಯಲ್ಲಿದ್ದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿದೆ. ಹಾಗಾಗಿ, ರಸ್ತೆಯನ್ನು ಬಂದ್‌ ಮಾಡಲಾಗಿದ್ದು, ಮನೆಯಿಂದ ಯಾರೂ ಹೊರ ಬಾರದಂತೆ ಧ್ವನಿವರ್ಧಕದ ಮೂಲಕ ತಿಳಿಸಲಾಗುತ್ತಿದೆ. ಮತ್ತೊಂದೆಡೆ ರಸ್ತೆ ಸೀಲ್‌ಡೌನ್‌ ಆಗುವುದು ಗೊತ್ತಾಗುತ್ತಿದ್ದಂತೆ ಕೆಲವರು ಮನೆ ಖಾಲಿ ಮಾಡಿ ತೆರಳುತ್ತಿದ್ದಾರೆ. ಲಗೇಜ್‌ ಪ್ಯಾಕ್‌ ಮಾಡಿಕೊಂಡು, ಸಂಬಂಧಿಗಳು, ಸ್ನೇಹಿತರ ಮನೆಗೆ ತೆರಳಿದರು.

ಮತ್ತೊಂದೆಡೆ ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಅಧಿ ಕಾರಿಗಳು ಈ ರಸ್ತೆಯಲ್ಲಿರುವ ಎಲ್ಲ ಮನೆಗಳಿಗೂ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇವರ ಆರೋಗ್ಯ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇನ್ನು, ಜನರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next