Advertisement

ಮತ್ತೆ ಮೂವರಿಗೆ ಕೋವಿಡ್

12:40 PM Jun 25, 2020 | Naveen |

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ ಮೂರು ಜನರಲ್ಲಿ ಸೋಂಕು ಪತ್ತೆಯಾಗಿದೆ. ಈವರೆಗೆ 119 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 88 ಜನರು ಗುಣಮುಖರಾಗಿದ್ದಾರೆ. 30 ಸಕ್ರಿಯ ಪ್ರಕರಣಗಳಿವೆ.

Advertisement

ಬುಧವಾರ ಇಲ್ಲಿನ ಪುರಲೆಯಲ್ಲಿ ವಾಸವಾಗಿದ್ದ ಮೂವರಲ್ಲಿ ಬುಧವಾರ ಕೋವಿಡ್ ಸೋಂಕು ಪತ್ತೆಯಾಗಿವೆ. ಮಹಾರಾಷ್ಟ್ರದ ಪುಣೆಯಿಂದ ಜೂನ್‌ 4ರಂದು ಶಿವಮೊಗ್ಗಕ್ಕೆ ಬಂದಿದ್ದ ಇವರನ್ನು ಜೂ.9ರ ವರೆಗೆ ಸಾಂಸ್ಥಿಕ ಕ್ವಾರಂಟೈನ್‌ ನಲ್ಲಿ ಇರಿಸಲಾಗಿತ್ತು. ಈ ಅವಧಿಯಲ್ಲಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ವರದಿ ನೆಗೆಟಿವ್‌ ಬಂದಿತ್ತು. ಹೀಗಾಗಿ, ಅವರನ್ನು ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ನಿರ್ದೇಶನ ನೀಡಲಾಯಿತ್ತು. ಜೂ.18ರಂದು ಇವರಲ್ಲಿ ಐಎಲ್‌ಐ ಲಕ್ಷಣಗಳು ಕಂಡುಬಂದಿದ್ದು, ತಕ್ಷಣ ಆರೋಗ್ಯ ಇಲಾಖೆ ಸಿಬ್ಬಂದಿ ಇವರ ಸ್ವಾಬ್‌ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಆಗ ಮೂವರಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.

14 ಜನ ಪ್ರಾಥಮಿಕ ಸಂಪರ್ಕ: ಪಿ-9897 (36 ವರ್ಷ), ಪಿ-9898 (20) ಮತ್ತು ಪಿ-9899(21) ಇವರು ಶಿವಮೊಗ್ಗದ ಮಾಚೇನಹಳ್ಳಿ ಕೈಗಾರಿಕಾ ವಲಯದಲ್ಲಿರುವ ಶಾಹಿ ಗಾರ್ಮೆಂಟ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಪುಣೆಯಿಂದ ಶಿವಮೊಗ್ಗೆಕ್ಕೆ ವಾಪಸ್‌ ಬಂದ ಬಳಿಕ ಅವರು ಕರ್ತವ್ಯಕ್ಕೆ ಹಾಜರಾಗಿಲ್ಲ. ಆರೋಗ್ಯ ಇಲಾಖೆ ನಿರ್ದೇಶನದಂತೆ ಮನೆಯಲ್ಲಿಯೇ ಇದ್ದರು. ಆದರೆ ಈ ಅವಧಿಯಲ್ಲಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಸಹೋದ್ಯೋಗಿಗಳು ಯೋಗಕ್ಷೇಮ ವಿಚಾರಿಸಲು ಪುರಲೆಯಲ್ಲಿರುವ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ, 14 ಜನ ಸಂಪರ್ಕಕ್ಕೆ ಬಂದಿರುವುದು ಪರಿಶೀಲನೆ ವೇಳೆ ತಿಳಿದುಬಂದಿದೆ. ಅವರನ್ನೂ ಕ್ವಾರಂಟೈನ್‌ ಮಾಡಲಾಗಿದೆ. ತಹಶೀಲ್ದಾರ್‌ ನಾಗರಾಜ್‌ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಕೂಡ ಗಾರ್ಮೆಂಟ್ಸ್ ‌ಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಕಾರ್ಖಾನೆಯನ್ನು ಸ್ಯಾನಿಟೈಸ್‌ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next