Advertisement

ಮತ್ತಿಬ್ಬರಿಗೆ ಕೋವಿಡ್ ಸೋಂಕು

06:49 PM Jun 05, 2020 | Naveen |

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ ಮತ್ತಿಬ್ಬರಿಗೆ ಕೋವಿಡ್ ಸೋಂಕು ತಗುಲಿದೆ. ಇದರಿಂದ ಒಟ್ಟು ಪಾಸಿಟಿವ್‌ ಸಂಖ್ಯೆ ಜಿಲ್ಲೆಯಲ್ಲಿ 53ಕ್ಕೆ ಏರಿಕೆಯಾಗಿದೆ.

Advertisement

ಇವರಿಬ್ಬರು ಮಹಾರಾಷ್ಟ್ರದಿಂದ ಶಿವಮೊಗ್ಗಕ್ಕೆ ಹಿಂತಿರುಗಿದ್ದಾರೆ. ಹಾಗಾಗಿ ಅವರಿಗೆ ಕೋವಿಡ್ ಪರೀಕ್ಷೆ ನಡೆಸಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಕೋವಿಡ್ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಅವರಿಗೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಿಸಲಾಗಿದೆ. ಇಬ್ಬರು ಹೊಸ ಸೋಂಕಿತರಿಂದಾಗಿ ಶಿವಮೊಗ್ಗದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಈ ಪೈಕಿ 30 ಮಂದಿ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸಾcರ್ಜ್‌ ಆಗಿದ್ದಾರೆ. ಇನ್ನೂ 23 ಜನಕ್ಕೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಯಾರದು ಇಬ್ಬರು?
ಪೇಷೆಂಟ್‌ ನಂಬರ್‌ 3910- ಒಂದು ವರ್ಷದ ಗಂಡು ಮಗು.ಪೇಷೆಂಟ್‌ ನಂಬರ್‌ 3911 – 22 ವರ್ಷದ ಪುರುಷ.

Advertisement

Udayavani is now on Telegram. Click here to join our channel and stay updated with the latest news.

Next