Advertisement

ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಿ

03:34 PM Apr 30, 2020 | Naveen |

ಶಿವಮೊಗ್ಗ: ಜಿಲ್ಲಾ ಮೆಗ್ಗಾನ್‌ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರಕಬೇಕು. ಯಾವುದೇ ದೂರು ಕೇಳಿ ಬರಬಾರದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ಮೆಗ್ಗಾನ್‌ ಆಸ್ಪತ್ರೆ ಸಭಾಂಗಣದಲ್ಲಿ ಬುಧವಾರ ಆಸ್ಪತ್ರೆ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಆಸ್ಪತ್ರೆಯ ಮೇಲಧಿಕಾರಿಗಳು ಸಮಯಕ್ಕೆ ಸರಿಯಾಗಿ ಕೆಲಸ ಮಾಡಬೇಕು. ಆಗ ಕೆಳಗಿನ ಸಿಬ್ಬಂದಿ ಕೂಡ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸುತ್ತಾರೆ. ಯಾವುದೇ ಕಾರಣಕ್ಕೂ ದೂರು ಕೇಳಿ ಬರಬಾರದು ಎಂದರು. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೆಲವು ವಿಭಾಗದಲ್ಲಿ ಸರಿಯಾಗಿ ಚಿಕಿತ್ಸೆ ದೊರಕುತ್ತಿಲ್ಲ ಎಂಬ ದೂರು ಇದೆ. ಇಂತಹ ಕೆಟ್ಟ ಅಭಿಪ್ರಾಯ ಹೋಗಲಾಡಿಸಬೇಕು. ಪ್ರತಿ ಬಾರಿ ಸಭೆ ನಡೆದಾಗ ಈ ವಿಷಯದ ಕುರಿತು ಚರ್ಚೆ ನಡೆಸುವುದು ಸರಿಯಲ್ಲ ಎಂದು ಹೇಳಿದರು. ಆಸ್ಪತ್ರೆಯಲ್ಲಿನ ಖಾಲಿ ಹುದ್ದೆ ಭರ್ತಿ ರೋಸ್ಟರ್‌ ಪದ್ಧತಿ ಪ್ರಕಾರ ನಡೆಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಮಾತನಾಡಿ, ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಗೆ ದಾಖಲಾಗುವ ಪ್ರತಿ ರೋಗಿಗಳ ದಾಖಲಾತಿಯನ್ನು ತಪ್ಪದೇ ಮಾಡಿಕೊಳ್ಳಬೇಕು. ಬಯೋಮೆಟ್ರಿಕ್‌ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಸಿಮ್ಸ್ ನಿರ್ದೇಶಕರು, ಸರ್ಜನ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next