Advertisement

Shimoga; ಮೂರು ತಾಲೂಕಿನ ಶಾಲಾ- ಕಾಲೇಜಿಗೆ ರಜೆ ಘೋಷಣೆ

08:33 PM Jul 30, 2024 | keerthan |

ಶಿವಮೊಗ್ಗ: ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲಾ – ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಿ ಆದೇಶ ಮಾಡಲಾಗಿದೆ.

ದ.ಕನ್ನಡ ರಜೆ ಘೋಷಣೆ

ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.31ರಂದು ಬುಧವಾರ ಪದವಿಪೂರ್ವ ಕಾಲೇಜುವರೆಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆ ಅಬ್ಬರ, ಪ್ರವಾಹ ಹಿನ್ನೆಲೆಯಲ್ಲಿ ಜು.31ರ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

Advertisement

ಚಿಕ್ಕಮಗಳೂರು 6 ತಾಲೂಕಿನ ಶಾಲೆಗಳಿಗೆ ರಜೆ

ಮಲೆನಾಡಿಗೆ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಆರು ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜು, ಪದವಿ ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ.

ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ‌ರಜೆ‌ ಘೋಷಣೆ ಮಾಡಿದ್ದು, ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ, ಅಜ್ಜಂಪುರಕ್ಕೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next