Advertisement

ಪಿಯು ಮೌಲ್ಯಮಾಪನ ಜಿಲ್ಲಾ ಮಟ್ಟದಲ್ಲೇ ನಡೆಸಿ: ಉಪನ್ಯಾಸಕರ ಸಂಘದ ಮನವಿ

04:52 PM May 28, 2020 | Naveen |

ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಮೌಲ್ಯಮಾಪನವನ್ನು ಜಿಲ್ಲಾ ಮಟ್ಟದಲ್ಲಿ ನಡೆಸುವಂತೆ ಒತ್ತಾಯಿಸಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿಂದ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Advertisement

ಈ ವೇಳೆ ಮಾತನಾಡಿದ ಸಂಘದ ಮುಖಂಡರು, ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಕೇಂದ್ರಗಳನ್ನು ಪ್ರತಿ ಜಿಲ್ಲೆಗಳಲ್ಲಿ ಆರಂಭಿಸುವಂತೆ ಮನವಿ ಮಾಡಲಾಗಿದೆ. ಮೌಲ್ಯಮಾಪನ ಪ್ರಕ್ರಿಯೆಯನ್ನು ಈ ಬಾರಿ ವಿಕೇಂದ್ರೀಕರಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವರಿಗೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಮಂಡ್ಯ, ಮೈಸೂರು ಹಾಗೂ ಬೆಂಗಳೂರು ಕೇಂದ್ರಗಳಲ್ಲಿ ಅರ್ಥಶಾಸ್ತ್ರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದೆ. ಮೇ 28ರಿಂದ ಅನೇಕ ಜಿಲ್ಲಾ ಕೇಂದ್ರಗಳಲ್ಲಿ ಇನ್ನುಳಿದ ವಿಷಯಗಳ ಮೌಲ್ಯಮಾಪನ ಕಾರ್ಯ ಆರಂಭವಾಗುತ್ತಿದ್ದು, ಈ ಕಾರ್ಯದಲ್ಲಿ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಹಾಜರಾಗುವಂತೆ ಇಲಾಖೆಯಿಂದ ಸಂದೇಶ ಬಂದಿದೆ ಎಂದು ತಿಳಿಸಿದರು.

ಮೌಲ್ಯಮಾಪನ ಮಾಡುವುದು ನಮ್ಮ ಆದ್ಯ ಕರ್ತವ್ಯ. ಅದಕ್ಕೆ ನಾವು ಸಿದ್ಧರಿದ್ದೇವೆ. ಆದರೆ ಇಲ್ಲಿ ಕೆಲವು ಮುಖ್ಯ ಸಮಸ್ಯೆಗಳಿದ್ದು, ಅವುಗಳು ಪರಿಹಾರವಾಗದ ಹೊರತು ಮೌಲ್ಯಮಾಪನ ಮಾಡುವುದು ಕಷ್ಟದ ಮಾತು ಎಂದು ಆತಂಕ ವ್ಯಕ್ತಪಡಿಸಿದ ಅವರು, ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿದರು. ಈ ವೇಳೆ ಯೋಗೀಶ್‌, ಕಲಿಂಮುಲ್ಲಾ, ರಾಜಶೇಖರ್‌, ಚಂದ್ರಶೇಖರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next