ಮಣಿಪಾಲ: ರಜತಾದ್ರಿಯ ಕೆಸ್ವನ್ ಕೇಂದ್ರದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆ ಪೂರ್ವ ಸಿದ್ಧತೆ ಕುರಿತ ಅಂತರ್ ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಯಿತು.
ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮಾತನಾಡಿ, ಬೈಂದೂರು ಕ್ಷೇತ್ರದಲ್ಲಿ ನಗರ ವ್ಯಾಪ್ತಿಯಲ್ಲಿ 26 ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ 220 ಒಟ್ಟು 246 ಮತಗಟ್ಟೆಗಳಿವೆ. 1,16,310 ಪುರುಷರು, 1,21,413 ಮಹಿಳೆಯರು 3 ತೃತೀಯ ಲಿಂಗದವರು ಸೇರಿದಂತೆ ಒಟ್ಟು 2,37,726 ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು. ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ 21 ಸೆಕ್ಟರ್ ಆಫೀಸರ್ ನೇಮಕ ಮಾಡಲಾಗಿದೆ ಎಂದರು.
ಅಭ್ಯರ್ಥಿಗಳ ಚುನಾವಣ ವೆಚ್ಚದ ಮೇಲೆ ನಿಗಾ ವಹಿಸಲಾಗುತ್ತಿದ್ದು, ಚುನಾವಣೆ ಅಕ್ರಮಗಳನ್ನು ತಡೆಯಲು 26 ಅಂತರ್ ಜಿಲ್ಲಾ ಗಡಿಗಳಲ್ಲಿ ಚೆಕ್‌ಪೋಸ್ಟ್ ತೆರೆಯಲಾಗಿದೆ. ಎರಡು ಜಿÇÉೆಯ ವಿವಿಧ ಇಲಾಖೆ ಅಧಿಕಾರಿಗಳು , ಪೊಲೀಸ್, ಅರಣ್ಯಾಧಿಕಾರಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಸಭೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್, ಉಡುಪಿ ಎಸ್‌ಪಿ ಡಾ| ಅರುಣ್ ಕೆ., ಶಿವಮೊಗ್ಗ ಎಡಿಸಿ ಸಿದ್ದಲಿಂಗ ರೆಡ್ಡಿ, ಉಡುಪಿ ಎಡಿಸಿ ಮಮತಾ ದೇವಿ ಸಭೆಯಲ್ಲಿದ್ದರು.