Advertisement

21ರಿಂದ ನಿಷೇಧಾಜ್ಞೆ ಜಾರಿ

03:29 PM Apr 11, 2019 | Naveen |

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏ. 21ರ ಸಂಜೆ 6 ಗಂಟೆಯಿಂದ 24ರ ಸಂಜೆ 6ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ಧಿಕಾರಿ ಕೆ.ಎ.ದಯಾನಂದ್‌ ಅವರು ಆದೇಶ ಹೊರಡಿಸಿದ್ದಾರೆ.

Advertisement

ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಏ.23ರಂದು ಮತದಾನ
ಕೇಂದ್ರಗಳಿಗೆ ಮತ ಚಲಾಯಿಸಲು ಬರುವ ಮತದಾರರನ್ನು ಹೊರತುಪಡಿಸಿ ಉಳಿದಂತೆ 5 ಜನ ಮೇಲ್ಪಟ್ಟು ಗುಂಪುಗೂಡುವುದಾಗಲಿ ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸದಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು
ಮೆರವಣಿಗೆ ಹಾಗೂ ಪ್ರತಿಭಟನೆ ನಡೆಸುವಂತಿಲ್ಲ. ಶಸ್ತ್ರ, ಕುಡುಗೋಲು, ಖಡ್ಗ,
ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ನ್ಪೋಟಕ ವಸ್ತು ರವಾನಿಸುವಂತಿಲ್ಲ. ಕಲ್ಲು
ಅಥವಾ ಎಸೆಯುವ ವಸ್ತು ಅಥವಾ ಚಲಿಸುವ ಅಸ್ತ್ರಗಳನ್ನು ಸಂಗ್ರಹಿಸುವುದು,
ತಯಾರಿಸುವುದನ್ನು ನಿಷೇಧಿ ಸಲಾಗಿದೆ ಎಂದು ತಿಳಿಸಿದ್ದಾರೆ.

ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸೋಟಕ ವಸ್ತುಗಳನ್ನು,
ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್‌ ಅಧಿಕಾರಿಗಳಿಗೆ ಅಧಿ ಕಾರ ನೀಡಲಾಗಿದೆ. ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಸೂಚಿಸಲಾಗಿದೆ. ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚು ಜನ ಗುಂಪು-ಗುಂಪಾಗಿ ನಿಲ್ಲುವುದನ್ನು ಹಾಗೂ ಓಡಾಡುವುದನ್ನು ನಿಷೇ ಧಿಸಿ
ಆದೇಶ ಹೊರಡಿಸಿರುವ ಅವರು ಭಾಷಣ ಹಾಗೂ ಪ್ರಚೋದನಕಾರಿಯಾಗಿ
ಮಾತನಾಡುವುದನ್ನು, ಬ್ಯಾನರ್‌ ಅಥವಾ ಫ್ಲೆಕ್ಸ್‌ ಅಂಟಿಸುವುದನ್ನು
ನಿಷೇಧಿಸಲಾಗಿದೆ.

ಚುನಾವಣಾ ಆಯೋಗ ನೀಡಿರುವ ಸ್ಪಷ್ಟೀಕರಣದಂತೆ ಮತದಾನದ ಹಿಂದಿನ 48ಗಂಟೆಗಳ ಅವ ಧಿಯಲ್ಲಿ ಅಭ್ಯರ್ಥಿಯು ಮನೆ-ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡುವುದಕ್ಕೆ ವಿನಾಯಿತಿ ನೀಡಲಾಗಿದೆ.

Advertisement

ಆದರೆ 10ಕ್ಕಿಂತ ಹೆಚ್ಚು ಜನರು ಈ ಗುಂಪಿನಲ್ಲಿ ಇರುವಂತಿಲ್ಲ. ಈ ನಿಷೇಧಾಜ್ಞೆ ಸದುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ,
ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್‌ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ ಹಾಗೂ ಇನ್ನಿತರೆ
ಸಮಾರಂಭಗಳನ್ನು ನಡೆಸಲು, ಸಂಬಂಧ ಪಟ್ಟ ಪೊಲೀಸ್‌ ಅಧಿ ಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ಕಾರ್ಯಾಚರಣೆ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ
ಭಾರತೀಯ ದಂಡಸಂಹಿತೆ 188ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಅವರು ತಿಳಿಸಿದ್ದಾರೆ.

23ರಂದು ಸಂತೆ-ಜಾತ್ರೆಗಳಿಗೆ ನಿಷೇಧ
ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಾಗೂ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಏ.23ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯೊಳಗೆ ಬರುವ ಎಲ್ಲಾ ಪ್ರದೇಶಗಳಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರು ಆದೇಶ ಹೊರಡಿಸಿದ್ದಾರೆ.

21ರಂದು ಮದ್ಯ ಮಾರಾಟ ನಿಷೇಧ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಮತ್ತು ಬೈಂದೂರು ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಏ.23ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ನಡೆಯುವ ದಿನಾಂಕಗಳಂದು ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರು ಆದೇಶ ಹೊರಡಿಸಿದ್ದಾರೆ.

ಏ.21ರ ಸಂಜೆ 6ಗಂಟೆಯಿಂದ 24ರ ಮಧ್ಯರಾತ್ರಿ 12ಗಂಟೆಯವರೆಗೆ ಎಲ್ಲಾ ವಿಧದ ಮದ್ಯ ತಯಾರಿಕಾ ಘಟಕಗಳನ್ನು, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವ ಸಿಎಲ್‌-2, ಸಿಎಲ್‌-4, ಸಿಎಲ್‌-7, ಸಿಎಲ್‌-8, ಸಿಎಲ್‌-9, ಸಿಎಲ್‌-11(ಸಿ) ಮತ್ತು ಸಿಎಲ್‌-14 ಹಾಗೂ ವೈನ್‌ ಟಾವರಿನ್‌, ವೈನ್‌ ಬೊಟಿಕ್‌, ಕೆ.ಎಸ್‌.ಬಿ.ಸಿ.ಎಲ್‌ ಡಿಪೋಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಹಾಗೂ ಈ ದಿನಗಳಂದು ಸದರಿ ಪ್ರದೇಶದಲ್ಲಿ ಯಾವುದೇ ತರಹದ ಮದ್ಯ ತಯಾರಿಕೆ, ದಾಸ್ತಾನು, ಸಾಗಾಣಿಕೆ, ಮಾರಾಟ ಮಾಡುವುದನ್ನು ನಿಷೇ ಧಿಸಿ ಅವರು ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next