Advertisement

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓರ್ವ ಬಲಿ

07:40 AM Nov 14, 2017 | |

ಶಿವಮೊಗ್ಗ: ಜಿಲ್ಲಾಡಳಿತದ ನಿಷೇಧದ ನಡುವೆಯೂ ಯಾವುದೇ ಅನುಮತಿ ಪಡೆಯದೆ ತಾಲೂಕಿನ ಆಯನೂರು ಕೋಟೆಯಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓರ್ವ ಮೃತಪಟ್ಟ ಘಟನೆ ನಡೆದಿದೆ.

Advertisement

ಆಯನೂರು ಸಮೀಪದ ಬಾಳೆಕೊಪ್ಪ ಗ್ರಾಮದ ನಿವಾಸಿ ಚಂದ್ರಶೇಖರ (38) ಮೃತವ್ಯಕ್ತಿ. ಸ್ಪರ್ಧೆಯಲ್ಲಿ ಹೋರಿ ಹಿಡಿಯಲು ಮುಂದಾದ ಚಂದ್ರುವಿನ ಹೊಟ್ಟೆಯ ಕೆಳಭಾಗಕ್ಕೆ ಹೋರಿ ಬಲವಾಗಿ ತಿವಿದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ತಕ್ಷಣವೇ ಗ್ರಾಮಸ್ಥರು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾನೆ. ಘಟನೆಯ ನಂತರ ಹೋರಿ ಬೆದರಿಸುವ ಸ್ಪರ್ಧೆಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದೆ. ಕುಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನುಮತಿ ಇರಲಿಲ್ಲ: ಆಯನೂರು ಕೋಟೆ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಗೆ ಅವಕಾಶ ನೀಡುವುದಿಲ್ಲವೆಂದು ಜಿಲ್ಲಾ ರಕ್ಷಣಾಧಿಕಾರಿ ಅಭಿನವ್‌ ಖರೆ ಸ್ಪಷ್ಟವಾಗಿ ತಿಳಿಸಿದ್ದರು.

ಇದರ ಹೊರತಾಗಿಯೂ ಕೆಲವರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದರು. ನೂರಾರು ಜನ ಸ್ಪರ್ಧೆವೇಳೆ ಜಮಾಯಿಸಿದ್ದರು. ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಬಾರಿ ಎರಡು ಸಾವು
ಕಳೆದ ವರ್ಷ ಸೊರಬ ತಾಲೂಕು ಆನವಟ್ಟಿಯಲ್ಲಿ ಆ ಯೋಜಿಸಿದ್ದ ಸ್ಪರ್ಧೆಯಲ್ಲಿ ಇಬ್ಬರು ಮೃತಪಟ್ಟಿದ್ದರು. ಇದೇ
ಆಯನೂರು ಗ್ರಾಮದಲ್ಲಿ ಮೂವರು ಗಂಭೀರವಾಗಿ ಗಾಯ ಗೊಂಡಿ ದ್ದರು. ಆಗ 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.ಈ ಕಾರಣದಿಂದ ಹೋರಿ ಬೆದರಿಸುವ ಸ್ಪರ್ಧೆಗಳ ಮೇಲೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next