Advertisement

ಶಿವಮೊಗ್ಗ: ಕೆರೆಯಲ್ಲಿ ಮುಳುಗಿ ತಾಯಿ, ಮಕ್ಕಳ ಸಾವು

10:58 PM Nov 20, 2020 | mahesh |

ಶಿವಮೊಗ್ಗ: ಕೆರೆಯಲ್ಲಿ ಮುಳುಗಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪಿದ ಘಟನೆ ಸೊರಬ ತಾಲೂಕಿನ ಆನವಟ್ಟಿ ಸಮೀಪದ ಹಿರೇಚೌಟಿ ಗ್ರಾಮದಲ್ಲಿ ಘಟನೆ.
ತಾಯಿ ಹಾಗೂ ಮಕ್ಕಳು ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದಾಗ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.

Advertisement

ವಿದ್ಯಾ (32) ಹಾಗೂ ಮಕ್ಕಳಾದ ಕನ್ನಿಕಾ (6) ಮತ್ತು ನಯನ (3) ಕೆರೆಯಲ್ಲಿ ಬಿದ್ದು ಮೃತಪಟ್ಟವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ
ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.

ವಿದ್ಯಾಳ ತಾಯಿ ಮನೆಯವರು ಇದು ಆಕಸ್ಮಿಕ ಸಾವಲ್ಲ. ಕೊಲೆ ಮಾಡಲಾಗಿದೆ ಎಂದು ಶಂಖೆ ವ್ಯಕ್ತಪಡಿಸಿದ್ದಾರೆ‌. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next