Advertisement

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

01:31 PM Sep 29, 2024 | keerthan |

ಶಿವಮೊಗ್ಗ: ಕಳೆದ ಎರಡು ತಿಂಗಳಿನಿಂದ ಸಿದ್ದರಾಮಯ್ಯ- ಮುಡಾ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಡಾ ಹಗರಣದ ಬಗ್ಗೆ ಮಾತಾನಾಡಿದಾಗ ಬಿಜೆಪಿಯವರು ರಾಜ್ಯಪಾಲರ ಕಚೇರಿ ದುರುಪಯೋಗ ಮಾಡಿಕೊಂಡಿದ್ದರು ಎಂದರು. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಮಾಡಿಕೊಂಡಿದ್ದಾರೆಂದು ಕಾಂಗ್ರೆಸ್ ನವರು ಆರೋಪ ಮಾಡಿದರು. ಈಗ ಕಾನೂನಿನ ಚೌಕಟ್ಟಿನಲ್ಲಿ ಕೋರ್ಟ್ ಆದೇಶ ಮಾಡಿದೆ. ಹೈಕೋರ್ಟ್ ಆದೇಶ ಮಾಡಿದರೂ ಮೊಂಡುವಾದ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

Advertisement

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಿರ್ಮಲಾ ಸೀತಾರಾಮನ್, ನಳಿಲ್ ಕುಮಾರ್ ಕಟೀಲ್, ವಿಜಯೇಂದ್ರ ಮೇಲೆ ರಾಜಕೀಯ ದ್ವೇಷಕ್ಕಾಗಿ ಎಫ್ಐಆರ್ ಮಾಡಿದ್ದಾರೆ. ಅವರ ಮೇಲೆ ಎಫ್ಐಆರ್ ಮಾಡಿ ಜನರ ದಿಕ್ಕು ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ. ಸಂವಿಧಾನ ಬದ್ಧವಾಗಿ ಬಾಂಡ್ ಪೇಪರ್ ತೆಗೆದುಕೊಂಡು ಚುನಾವಣೆ ಎದುರಿಸಿದ್ದಾರೆ. ದುರುದ್ದೇಶದಿಂದ ಜನರ ಚಿಂತನೆಯನ್ನು ಬೇರೆ ಕಡೆ ಸೆಳೆಯಲು ಹೀಗೆ ಮಾಡುತ್ತಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹಗುರವಾಗಿ ಅಧಿಕಾರಿಗಳಿಂದ ಮಾತನಾಡಿಸುತ್ತಿದ್ದಾರೆ ಎಂದರು.

ತುಂಬಾ ವರ್ಷಗಳ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರ ಮಿತಿಮೀರಿ ವರ್ತಿಸುತ್ತಿದೆ. ಈ ಸರ್ಕಾರಕ್ಕೆ ಜನ ಆದಷ್ಟು ಬೇಗ ಸರಿಯಾದ ಪಾಠ ಕಲಿಸುತ್ತಾರೆ ಎಂದು ರಾಘವೇಂದ್ರ ಗುಡುಗಿದರು.

ಸೆ.17 ರಿಂದ ಅ.2ವರೆಗೂ ಬಿಜೆಪಿ ಸೇವಾ ಪಾಕ್ಷಿಕ ಕಾರ್ಯಕ್ರಮ ನಡೆಯುತ್ತಿದೆ. ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಈ ಕಾರ್ಯಕ್ರಮ ನಡೆಯುತ್ತಿವೆ. ಬಿಜೆಪಿ ಚುನಾವಣೆಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿದೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next