Advertisement
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸ್ಮಾರ್ಟ್‌ಸಿಟಿ ಕಾಮಗಾರಿಗಳ ಪ್ರಗತಿ ಹಾಗೂ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿರುವ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಸ್ಮಾರ್ಟ್‌ಸಿಟಿ ಯೋಜನೆಯಡಿ ಅನೇಕ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಅವುಗಳ ನಿರ್ವಹಣೆ ಮತ್ತು ಮೇಲುಸ್ತುವಾರಿಗಾಗಿ ಕೊರತೆ ಇರುವ ಸಿಬ್ಬಂದಿಗಳ ತಾತ್ಕಾಲಿಕ ಅವಧಿಗೆ ನೇಮಿಸಿಕೊಳ್ಳಲು ಸೂಚಿಸಲಾಗಿದೆ. ನಗರದ ಹಲವೆಡೆ ಕೈಗೊಂಡ ಕಾಮಗಾರಿಗಳು ಹಾಗೂ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ನಗರದ ಎಲ್ಲಾ ವಾರ್ಡುಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗುವುದು.
ಮರುದಿನ ಬೆಳಗ್ಗೆ ಈ ಭೇಟಿಯ ನಂತರ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು. ನಗರದ ವ್ಯಾಪ್ತಿಯಲ್ಲಿ ಕೈಗೊಂಡ ಯು.ಜಿ.ಡಿ. ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಡಿ. 4ರೊಳಗಾಗಿ ಯಾವುದೇ ಒಂದು ವಾರ್ಡನ್ನಾದರೂ ಪೂರ್ಣಗೊಳಿಸಿ ವರದಿ ನೀಡುವಂತೆ ಅವರು ಲೋಕೋಪಯೋಗಿ ಇಲಾಖೆಯ ಅಭಿಯಂತರರಿಗೆ ಸೂಚಿಸಿದರು.
ಶಿವಮೊಗ್ಗ ಮಹಾನಗರಪಾಲಿಕೆಯ ವತಿಯಿಂದ ನಗರಾಭಿವೃದ್ಧಿಗಾಗಿ ಕೈಗೊಂಡಿರುವ ಯೋಜನೆಗಳು ಹಾಗೂ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ಸಂಬಂಧಿತ ಇಲಾಖೆಗಳ ಸಮಸ್ಯೆ-ಸವಾಲುಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಬೆಂಗಳೂರಿನಲ್ಲಿ ಸದ್ಯದಲ್ಲಿ ಸಭೆ ಕರೆಯಲಾಗುವುದು ಎಂದರು.
ರಾಜ್ಯ ಸರ್ಕಾರವು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಳೆಯಿಂದ ಹಾನಿಗೊಳಗಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತಲಾ 25 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಈ ಕ್ಷೇತ್ರಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ಶಾಸಕರಾದ ರುದ್ರೇಗೌಡ, ಆರ್. ಪ್ರಸನ್ನಕುಮಾರ್, ಕೆ.ಬಿ. ಅಶೋಕ ನಾಯ್ಕ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ಎಸ್. ವಟಾರೆ, ಪಾಲಿಕೆಯ ಉಪಮಹಾಪೌರ ಚನ್ನಬಸಪ್ಪ ಮತ್ತಿತರರು ಇದ್ದರು.