Advertisement

ಬಿಸಿಯೂಟ ಕಾರ್ಮಿಕರ ಪ್ರತಿಭಟನೆ

12:58 PM Jul 04, 2020 | Naveen |

ಶಿವಮೊಗ್ಗ: ಮಧ್ಯಾಹ್ನದ ಬಿಸಿಯೂಟ ಕಾರ್ಮಿಕರಿಗೆ ಏಪ್ರಿಲ್‌ ತಿಂಗಳಿನಿಂದ ವೇತನ ಹಾಗೂ ಇನ್ನಿತರ ಸೌಲಭ್ಯ ನೀಡಬೇಕೆಂದು ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಶಾಖೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Advertisement

ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕಳೆದ 20 ವರ್ಷಗಳಿಂದ 1.16 ಲಕ್ಷ ಬಡ ಮಹಿಳಾ ಕಾರ್ಮಿಕರು ದುಡಿಯುತ್ತಿದ್ದಾರೆ. ಕೊರೊನಾದಿಂದಾಗಿ ಬಡ ಕಾರ್ಮಿಕರು ಉದ್ಯೋಗ ಕಳೆದುಕೊಂಡು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಬಂದಿದೆ ಎಂದರು. ಕಳೆದ ಏಪ್ರಿಲ್‌ ತಿಂಗಳಿನಿಂದ ಯಾವುದೇ ಕೆಲಸವಿಲ್ಲದೇ, ವೇತನವೂ ಇಲ್ಲದೇ, ಸರ್ಕಾರದ ಸೌಲಭ್ಯವಿಲ್ಲದೇ ದಿನನಿತ್ಯದ ಜೀವನಕ್ಕೆ ಪರದಾಡುವಂತಾಗಿದೆ ಎಂದರು. ಜಿಲ್ಲಾಧ್ಯಕ್ಷೆ ಅಕ್ಕಮ್ಮ, ಪ್ರಧಾನ ಕಾರ್ಯದರ್ಶಿ ಹನುಮಮ್ಮ, ವೆಳ್ಳಿಯಮ್ಮ, ಭಾಗ್ಯಮ್ಮ, ಅಶ್ವಿ‌ನಿ, ತಾರಾ, ಕೆ.ಲತಾ ಇನ್ನಿತರರು ಭಾಗವಹಿಸಿದ್ದರು

Advertisement

Udayavani is now on Telegram. Click here to join our channel and stay updated with the latest news.

Next