Advertisement

ಹೋಂ ಕ್ವಾರಂಟೈನ್‌ ಉಲ್ಲಂಘಿಸಿದರೆ ಕ್ರಮ: ಡಿಸಿ

07:05 PM Jun 26, 2020 | Naveen |

ಶಿವಮೊಗ್ಗ: ಗೃಹ ದಿಗ್ಬಂಧನ(ಹೋಂ ಕ್ವಾರಂಟೈನ್‌) ನಿಯಮ ಉಲ್ಲಂಘನೆ ಯಿಂದ ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿರುವುದು ಕಂಡುಬರುತ್ತಿದ್ದು, ಈ ಕುರಿತು ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶ ಹಾಗೂ ಕೋವಿಡ್‌ ರೋಗಗಳನ್ನು ತಡೆಗಟ್ಟುವ ಸಲುವಾಗಿ ಹೊರಡಿಸಲಾಗಿರುವ ಇತರೆ ನಿರ್ದೇಶನಗಳನ್ನು ಪಾಲಿಸದೇ ಇದ್ದವರ ಮೇಲೆ ಪೊಲೀಸ್‌ ಠಾಣೆಗಳಲ್ಲಿ ಕ್ರಿಮಿನಲ್‌ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

Advertisement

ಶಿವಮೊಗ್ಗ ಜಿಲ್ಲೆಗೆ ಮಹಾರಾಷ್ಟ್ರ ಮತ್ತು ಇತರೆ ರಾಜ್ಯಗಳಿಂದ ಆಗಮಿಸುವವರನ್ನು ಸರ್ಕಾರದ ನಿರ್ದೇಶನದಂತೆ 14 ದಿನಗಳ ಗೃಹ ದಿಗ್ಬಂಧನದಲ್ಲಿ ಇರಿಸಿ ಅವರ ಮನೆಗಳನ್ನು ಸೀಲ್‌ಡೌನ್‌ ಮಾಡಲಾಗುತ್ತಿದೆ. ಗೃಹ ದಿಗ್ಬಂಧನದಲ್ಲಿ ಇರಿಸಿದ ವ್ಯಕ್ತಿ ಗಳು ಯಾವುದೇ ಕಾರಣಕ್ಕೂ ದಿಗ್ಬಂಧನ ನಿಯಮ ಉಲ್ಲಂಘಿಸಿದರೆ ಸೋಂಕು ಸಮುದಾಯಕ್ಕೆ ಹರಡುವ ಸಾಧ್ಯತೆ ಗಳು ಹೆಚ್ಚಿರುತ್ತದೆ. ಮೊದಲ ಬಾರಿ ಎಚ್ಚರಿಕೆ ನೀಡಲಾಗುವುದು. 2ನೇ ಬಾರಿ ಉಲ್ಲಂಘನೆಗೆ ಕೇಸ್‌ ದಾಖಲಿಸಿ ಸಾಂಸ್ಥಿಕ ದಿಗ್ಬಂಧನಕ್ಕೆ ವರ್ಗಾಯಿಸಲಾಗುವುದೆಂದು ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next