Advertisement

ಶಿವಮೊಗ್ಗ: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144

08:06 PM Feb 13, 2022 | Vishnudas Patil |

ಶಿವಮೊಗ್ಗ : ಜಿಲ್ಲೆಯ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸೆಲ್ವ ಮಣಿ ಆದೇಶ ಹೊರಡಿಸಿದ್ದಾರೆ.

Advertisement

ಕೆಲ ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.

ಶಾಲಾ ಕಾಲೇಜು ವ್ಯಾಪ್ತಿಗಲಿ ಬಿಗುವಿನ ವಾತಾವರಣ ನಿರ್ಮಾಣವಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಶಾಲಾ ಕಾಲೇಜು ಆವರಣದಲ್ಲಿ ಜನ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.

ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯ್ಕ್ ತಾಲೂಕಿನ ಎಲ್ಲಾ ಶಾಲಾ ಕಾಲೇಜು ಆವರಣದಿಂದ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ144 ಸೆಕ್ಷನ್ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ನಿಷೇದಾಜ್ಞೆ ಭಾನುವಾರ ರಾತ್ರಿ 10 ಘಂಟೆಯಿಂದ ಸೋಮವಾರ ರಾತ್ರಿ ೧೦ ಘಂಟೆಯವರೆಗೆ ಜಾರಿಯಲ್ಲಿರಲಿದೆ. ಉಚ್ಚ ನ್ಯಾಯಾಲಯದಲ್ಲಿ ಸದರಿ ವಿಷಯದ ಸಂಬಂಧ ವಿಚಾರಣೆ ನಡೆದು ಸೋಮವಾರ ತೀರ್ಪು ಬರುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next