Advertisement

ನ. 23ರಿಂದ ರಾಜ್ಯಮಟ್ಟದ ಒಲಂಪಿಕ್‌ ಕ್ರೀಡಾಕೂಟ

04:12 PM Oct 11, 2019 | Naveen |

ಶಿವಮೊಗ್ಗ: ಇದೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ರಾಜ್ಯಮಟ್ಟದ ಒಲಂಪಿಕ್‌ ಕ್ರೀಡಾಕೂಟ ಆತಿಥ್ಯ ವಹಿಸುವ ಅವಕಾಶ ಸಿಕ್ಕಿದೆ. ನ.23ರಿಂದ 30ರವರೆಗೆ ಜಿಲ್ಲೆಯ ನಾನಾ ತಾಲೂಕುಗಳಲ್ಲಿ ಒಟ್ಟು 23 ಸ್ಪರ್ಧೆ ಆಯೋಜಿಸಲು ರಾಜ್ಯ ಒಲಿಂಪಿಕ್‌ ಅಸೋಸಿಯೇಶನ್‌ ತೀರ್ಮಾನಿಸಿದೆ.

Advertisement

ಕ್ರೀಡಾ ಸಚಿವ ಕೆ.ಎಸ್‌. ಈಶ್ವರಪ್ಪ ಹಾಗೂ ವಿವಿಧ ಕ್ರೀಡಾ ಸಂಘಟನೆಗಳ ಪ್ರಮುಖರೊಂದಿಗೆ ಈಚೆಗೆ ಡಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ರಾಜ್ಯ ಒಲಂಪಿಕ್‌ ಅಸೋಸಿಯೇಶನ್‌ ಅಧ್ಯಕ್ಷ ಗೋವಿಂದರಾಜು ಈ ವಿಷಯ ತಿಳಿಸಿದರು.

ಪ್ರತಿ ವರ್ಷ ವಿವಿಧ ಜಿಲ್ಲೆಗಳಲ್ಲಿ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಕಳೆದ ವರ್ಷ ಮೈಸೂರಲ್ಲಿ ನಡೆದಿತ್ತು. ಈ ವರ್ಷ ಕ್ರೀಡಾ ಸಚಿವ ಕೆ.ಎಸ್‌. ಈಶ್ವರಪ್ಪ ಒತ್ತಾಯದ ಮೇರೆಗೆ ಶಿವಮೊಗ್ಗದಲ್ಲೇ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು.

ಕ್ರೀಡಾಕೂಟದಲ್ಲಿ ಸುಮಾರು ಐದು ಸಾವಿರ ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಇದೆ. ಎಲ್ಲರಿಗೂ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಬೇಕಿದೆ. ಭತ್ಯೆಯನ್ನು ಅಸೋಸಿಯೇಶನ್‌ನಿಂದ ನೀಡಲಾಗುವುದು. ಕ್ರೀಡಾಪಟುಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಹಣ ಜಮೆಯಾಗುವುದು ಎಂದು ಮಾಹಿತಿ ನೀಡಿದರು.

ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಎಲ್ಲ ಕ್ರೀಡೆಗಳನ್ನು ನಡೆಸಲು ಅವಕಾಶವಿಲ್ಲ. ಹಾಗಾಗಿ ಕುವೆಂಪು ವಿವಿ ಹಾಗೂ ಶಿವಮೊಗ್ಗ ನಾನಾ ಕಾಲೇಜುಗಳ ಕ್ರೀಡಾಂಗಣ ಹಾಗೂ ಅಲ್ಲಿನ ವ್ಯವಸ್ಥೆ ಬಳಸಿಕೊಳ್ಳಲಾಗುವುದು. ಈಗ ಕೇವಲ ಪೂರ್ವಭಾವಿ ಸಭೆ ನಡೆಸುತ್ತಿದ್ದು ಅ.16ರಂದು ಮತ್ತೆ ಕ್ರೀಡಾ ಸಂಘಟನೆಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ, ಆರ್ಯವೈಶ್ಯ ಸಮಾಜ ಅಭಿವೃದ್ಧಿ ನಿಗಮದ ಡಿ.ಎಸ್‌. ಅರುಣ್‌, ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಯಕ್ಷ ಕೆ.ಇ. ಕಾಂತೇಶ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next