Advertisement

Shimoga: ಪೊಲೀಸ್‌ ಸಿಬ್ಬಂದಿಯನ್ನೇ ಬಾನೆಟ್‌ ಮೇಲೆ ಹೊತ್ತೊಯ್ದ ಕಾರು!

06:25 PM Oct 24, 2024 | keerthan |

ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಎದುರು ಸಂಚಾರಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಕಾರು ನಿಲ್ಲಿಸದೆ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಘಟನೆ ಗುರುವಾರ (ಅ.24) ಮಧ್ಯಾಹ್ನ ನಡೆದಿದೆ.

Advertisement

ಬಿ.ಹೆಚ್.ರಸ್ತೆಯಲ್ಲಿ ವಾಹನ ತಪಾಸಣೆ ವೇಳೆ ಪೂರ್ವ ಸಂಚಾರ ಠಾಣೆಯ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದಾರೆ. ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೆ ಮುಂದೆ ಚಲಾಯಿಸಿದ್ದಾನೆ. ಪೊಲೀಸ್ ಸಿಬ್ಬಂದಿ ಕೂಡಲೆ ಕಾರಿನ ಮುಂಭಾಗ ಹಿಡಿದುಕೊಂಡು ಬಾನೆಟ್ ಮೇಲೆ ಹತ್ತಿದ್ದಾರೆ.

ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿ ಇದ್ದರೂ ಚಾಲಕ ಕಾರು ನಿಲ್ಲಿಸದೆ ಸಹ್ಯಾದ್ರಿ ಕಾಲೇಜು ಗೇಟ್‌ನಿಂದ ಮತ್ತೂರು ರಸ್ತೆವರೆಗೂ ಸಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಲ್ಲಿಂದ ಮುಂದೆ ಕಾರು ನಿಂತಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಪೊಲೀಸ್ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next